ಸಿಎಂ ಸಿದ್ದರಾಮಯ್ಯ ಮುಂದೆ 6 Naxals ಶರಣಾಗತಿ

Naxals Surrender
Published on

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವಗು ವರ್ಷಗಳಿಂದ ನಕ್ಸಲ್ (Naxals) ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ  6 ಮಂದಿ ನಕ್ಸಲರು ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಪ್ರಕ್ರಿಯೆಯಲ್ಲಿ ನಕ್ಸಲರು ಶರಣಾಗಿದ್ದಾರೆ.

ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ವಸಂತ್, ಜಿಶಾ ಶರಣಾದ ನಕ್ಸಲರು. ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ.

Naxals

ಪೊಲೀಸ್ ಭದ್ರತೆಯೊಂದಿಗೆ ನಕ್ಸಲರನ್ನು ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ಸಂಜೆ ಹೊತ್ತಿಗೆ ಕರೆತರಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ನಕ್ಸಲರು ಭೇಟಿಯಾದರು. ಈ ವೇಳೆ ನಕ್ಸಲರ ಜೊತೆ ಸಿಎಂ ಮಾತುಕತೆ ನಡೆಸಿದರು. ಆ ಬಳಿಕ ಆರು ಮಂದಿ ನಕ್ಸಲರು ಶರಣಾಗಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಡಿಜಿಪಿ ಅಲೋಕ್ ಮೋಹನ್ ಸಮ್ಮುಖದಲ್ಲಿ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆಯಿತು. ಈ ವೇಳೆ ಶರಣಾದ ನಕ್ಸಲರ ಕುಟುಂಬಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net