ರಾಜಸ್ಥಾನದಲ್ಲಿ ಭೀಕರ ಅಪಘಾತ; ಒಂದೇ ಕುಟುಂಬ ಐವರು ಸಾವು

car accidernt
Published on

ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್‌ನ ಮಹಾಜನ್‌ನ ಜೈತ್‌ಪುರ ಟೋಲ್ ಸಮೀಪ ನಡೆದಿದೆ.

ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಅವರು ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರಿಯಾಣದ ಪರವಾನಗಿ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಭೀಕರ ಅಪಘಾತಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net