More

    ಪಾಟ್ನಾದಲ್ಲಿ ಭೀಕರ ಅಗ್ನಿ ಅವಘಡ.. ಆರು ಮಂದಿ ಸಜೀವ ದಹನ

    ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದ ಪನ್ಪುನ್ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ . ಈ ಘಟನೆಯಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದು, ಹಲವರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ 11 ಗಂಟೆಗೆ ಪಾಟ್ನಾದ ಹೃದಯಭಾಗದಲ್ಲಿರುವ ಹೋಟೆಲ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕ್ರಮೇಣ ಹೋಟೆಲ್‌ನಾದ್ಯಂತ ಹರಡಿತು ಮತ್ತು ಎಲ್ಲಾ ಮಹಡಿಗಳಿಗೆ ವ್ಯಾಪಿಸಿತು.

    ಇದನ್ನೂ ಓದಿ: ಐಪಿಎಲ್​ನಲ್ಲಿ ಮತ್ತೊಂದು ದಾಖಲೆ ಬರೆಯಲು ಸಜ್ಜಾದ ವಿರಾಟ್​ ಕೊಹ್ಲಿ

    ಹೊಟೇಲ್‌ನಲ್ಲಿದ್ದ ಹಲವರು ಬೆಂಕಿ ಕಾಣಿಸಿಕೊಂಡು ಪ್ರಾಣ ಉಳಿಸಿಕೊಳ್ಳಲು ಓಡಿ ಬಂದಿದ್ದಾರೆ. ಆದರೆ ದುರದೃಷ್ಟವಶಾತ್ ಕೆಲವರು ಅದರಲ್ಲಿಯೇ ಉಳಿದಿದ್ದಾರೆ. ದಾರಿ ಕಾಣದ ಕಾರಣ ಆರು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

    ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಗಾಯಗೊಂಡ 30 ಜನರನ್ನು ಪೊಲೀಸರು ರಕ್ಷಿಸಿದ್ದಾರೆ. ಇದಕ್ಕಾಗಿ 8 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ತರಲಾಗಿತ್ತು. ರೈಲು ನಿಲ್ದಾಣದ ಸಮೀಪ ಜನನಿಬಿಡ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಮೃತರ ವಿವರ ಇನ್ನೂ ತಿಳಿದುಬಂದಿಲ್ಲ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

    ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಇತರ ಕಟ್ಟಡಗಳಿಗೂ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಹೋಟೆಲ್‌ನ ಮೊದಲ ಮಹಡಿಯಿಂದ ತಾಯಿ ಮತ್ತು ಮಗಳ ಶವಗಳನ್ನು ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಈ ಘಟನೆಯಲ್ಲಿ ಹೋಟೆಲ್‌ನ ಸೆಲ್ಲಾರ್‌ನಲ್ಲಿದ್ದ ವಾಹನಗಳೂ ಸುಟ್ಟು ಕರಕಲಾಗಿವೆ. ನಾವು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ. ಬೆಳಗ್ಗೆ 11 ಗಂಟೆಗೆ ನಮಗೆ ಮಾಹಿತಿ ಬಂದಿದೆ. ಅಪಘಾತದ ಕಾರಣಗಳನ್ನು ಕಂಡುಹಿಡಿಯಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಐಜಿ ಮೃತ್ಯುಂಜಯ್ ಕುಮಾರ್ ಚೌಧರಿ ವಿವರಿಸಿದರು.

    ಬೆಂಕಿ ಅವಘಡಕ್ಕೆ ಸಿಎಂ ನಿತೀಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಎಲ್ಲ ರೀತಿಯಿಂದಲೂ ನೆರವು ನೀಡುವುದಾಗಿ ಭರವಸೆ ನೀಡಿದರು.

    ಜೆಡಿಯು ನಾಯಕನ ಹತ್ಯೆ: ಪಾಟ್ನಾದ ಪನ್‌ಪುನ್ ಪ್ರದೇಶದಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಜೆಡಿಯು ನಾಯಕನನ್ನು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ ಹೋಟೆಲ್ ಅಪಘಾತ ಸಂಭವಿಸಿದೆ. ಜೆಡಿಯು ನಾಯಕ ಸೌರವ್ ಕುಮಾರ್ ಬುಧವಾರ ಮಧ್ಯರಾತ್ರಿ 12.15ಕ್ಕೆ ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸೌರವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಮಸೌರ್ಹಿ ಎಸ್‌ಡಿಪಿಒ ಕನ್ಹಯ್ಯಾ ಸಿಂಗ್ ತಿಳಿಸಿದ್ದಾರೆ.

    ಪೊಲೀಸ್​ ಮೇಲೆ ಕಾರು ಹತ್ತಿಸಿದ ಮಹಿಳೆ: ಕಾರಣ ಹೀಗಿದೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts