

ಸೂರತ್: ಗುಜರಾತ್‌ನ ಸೂರತ್‌ನಲ್ಲಿ ಶನಿವಾರ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು. 15 ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಛತ್ತೀಸಗಡದಲ್ಲಿ ಐವರು ನಕ್ಸಲರು ಶರಣು
ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅಧಿಕಾರಿಗಳ ಪ್ರಕಾರ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು. ಇಂದು ಈ ಕಟ್ಟಡ ಕುಸಿದು ಬಿದ್ದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಉಪಮೇಯರ್ ನರೇಂದ್ರ ಪಾಟೀಲ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಮುಖಂಡರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದ್ದಾರೆ. ಕಟ್ಟಡದಲ್ಲಿ 30 ಫ್ಲಾಟ್‌ಗಳಿದ್ದು, ಐದರಿಂದ ಆರು ಕುಟುಂಬಗಳು ವಾಸವಾಗಿದ್ದವು ಎಂದು ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹ್ಲೋಟ್ ಹೇಳಿದ್ದಾರೆ.
"ಕಟ್ಟಡ ಕುಸಿದ ಐದು ನಿಮಿಷಗಳ ನಂತರ, ಪೊಲೀಸರಿಗೆ ಮಾಹಿತಿ ನೀಡಲಾಯಿತು. ಹಿರಿಯ ಅಧಿಕಾರಿಗಳು ಮತ್ತು ರಕ್ಷಣಾ ತಂಡವು ಸ್ಥಳಕ್ಕೆ ತಲುಪಿದೆ. ಇದು 30-ಫ್ಲಾಟ್ ಯೋಜನೆಯಾಗಿದೆ. 5 ರಿಂದ 6 ಕುಟುಂಬಗಳು ವಾಸಿಸುತ್ತಿದ್ದವು. ಅಗ್ನಿಶಾಮಕ ದಳದ ತಂಡವು ಅವಶೇಷಗಳಿಂದ ಮಹಿಳೆಯನ್ನು ರಕ್ಷಿಸಿತು. ಕಟ್ಟಡ ಕುಸಿದಾಗ ಅನೇಕ ಮಂದಿ ಒಳಗಿದ್ದರು ಎಂದು ಕಾವಲುಗಾರ ಹೇಳಿದ್ದಾರ ಎಂದು ಗೆಹ್ಲೋಟ್ ಹೇಳಿದರು.