ಜಿಲ್ಲಾಧಿಕಾರಿ ಜಿ. ಜಗದೀಶ ನೇತೃತ್ವದಲ್ಲಿ 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು

bas
Published on

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಅಂದಾಜು 60.48 ಕೋಟಿ ಮೌಲ್ಯದ ಒಟ್ಟು 9.16 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸರ್ಕಾರಿ ಜಮೀನುಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿ, ಬಿದರಹಳ್ಳಿ ಗ್ರಾಮದ ಸ.ನಂ 193, ಕೊಡಿಗೆಹಳ್ಳಿ ಗ್ರಾಮದ ಸ.ನಂ 40, ವರ್ತೂರು ಹೋಬಳಿ ವಾಲೇಪುರ ಗ್ರಾಮದ ಸ.ನಂ. 29,

ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿ ನಂಜಾಪುರ ಗ್ರಾಮದ ಸ.ನಂ. 27, ಬನ್ನೇರುಘಟ್ಟ ಗ್ರಾಮದ ಸ.ನಂ 169, ಸರ್ಜಾಪುರ ಹೋಬಳಿಯ ಚಿಕ್ಕನಹಳ್ಳಿ ಕಾಮನಹಳ್ಳಿ ಗ್ರಾಮದ ಸ.ನಂ 19 ಸೇರಿ ವಿವಿಧ ಗ್ರಾಮಗಳಲ್ಲಿ ಒತ್ತುವರಿಯಾಗಿದ್ದ ಸರ್ಕಾರಿ ಜಮೀನುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಪುರದಪಾಳ್ಯ ಗ್ರಾಮ, ಉತ್ತರಹಳ್ಳಿ ಹೋಬಳಿಯ ಯಲಚೇನಹಳ್ಳಿ ಗ್ರಾಮ, ಕೆಂಗೇರಿ ಹೋಬಳಿಯ ಕೆಂಚನಪುರ ಗ್ರಾಮ, ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಅವ್ವೇರಹಳ್ಳಿ ಗ್ರಾಮ, ಕುದುರೆಗೆರೆ ಗ್ರಾಮ, ಲಕ್ಷ್ಮಿಪುರ ಗ್ರಾಮ, ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಶಿವಕೋಟಿ ಗ್ರಾಮ, ಜಾಲ ಹೋಬಳಿಯ ಬೆಟ್ಟಹಲಸೂರು ಗ್ರಾಮದಲ್ಲಿ ಒತ್ತುವರಿಯಾಗಿದ್ದ ಸರ್ಕಾರಿ ಜಮೀನನನ್ನು ವಶಪಡಿಸಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳೊಂದಿಗೆ ವಿವಿಧ ತಾಲ್ಲೂಕಿನ ತಹಶೀಲ್ದಾರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net