More

    VIDEO | ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಪೂರೈಸಿದ ವಿಶ್ವದ ಮೊದಲ ವೇಗಿ ಜೇಮ್ಸ್​ ಆಂಡರ್‌ಸನ್

    ಸೌಥಾಂಪ್ಟನ್: ಇಂಗ್ಲೆಂಡ್ ತಂಡದ ಅನುಭವಿ ವೇಗಿ ಜೇಮ್ಸ್ ಆಂಡರ್‌ಸನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 600 ವಿಕೆಟ್ ಕಬಳಿಸಿದ ವಿಶ್ವದ ಮೊಟ್ಟಮೊದಲ ವೇಗದ ಬೌಲರ್ ಮತ್ತು ಒಟ್ಟಾರೆ 4ನೇ ಬೌಲರ್ ಎಂಬ ಇತಿಹಾಸ ನಿರ್ಮಿಸಿದ್ದಾರೆ.

    38 ವರ್ಷದ ಜೇಮ್ಸ್ ಆಂಡರ್‌ಸನ್ ರೋಸ್‌ಬೌಲ್‌ನಲ್ಲಿ ನಡೆಯುತ್ತಿರುವ ಪ್ರವಾಸಿ ಪಾಕಿಸ್ತಾನ ವಿರುದ್ಧದ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಅಂತಿಮ ದಿನದಾಟದ ಅಂತಿಮ ಅವಧಿಯಲ್ಲಿ ಎದುರಾಳಿ ನಾಯಕ ಅಜರ್ ಅಲಿ (31) ವಿಕೆಟ್ ಕಬಳಿಸುವ ಮೂಲಕ 600 ವಿಕೆಟ್ ಪೂರೈಸಿದ ಸಾಧನೆ ಮಾಡಿದರು. ಈ ಮುನ್ನ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಅವರು 5 ವಿಕೆಟ್ ಗೊಂಚಲು ಕಬಳಿಸುವ ಮೂಲಕ ಆಸೀಸ್ ವೇಗಿ ಗ್ಲೆನ್ ಮೆಕ್‌ಗ್ರಾಥ್ ಅವರ 29 ಬಾರಿ 5 ವಿಕೆಟ್ ಗೊಂಚಲು ಪಡೆದ ಸಾಧನೆ ಸರಿಗಟ್ಟಿದ್ದರು.

    ಇದನ್ನೂ ಓದಿ: ಕರೊನಾ ಭೀತಿಯಿಂದ ಪಾರಾದ ಗೇಲ್, ನೆಗೆಟಿವ್ ವರದಿಯಿಂದ ಕಿಂಗ್ಸ್ ಇಲೆವೆನ್ ತಂಡ ನಿರಾಳ

    ಮೂವರು ಸ್ಪಿನ್ ದಿಗ್ಗಜರಾದ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (800), ಆಸ್ಟ್ರೇಲಿಯಾದ ಶೇನ್ ವಾರ್ನ್ (708) ಮತ್ತು ಭಾರತದ ಅನಿಲ್ ಕುಂಬ್ಳೆ (619) ಟೆಸ್ಟ್ ಕ್ರಿಕೆಟ್‌ನಲ್ಲಿ 600ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ವೃತ್ತಿಜೀವನದ 156ನೇ ಟೆಸ್ಟ್ ಪಂದ್ಯ ಆಡುತ್ತಿರುವ ಆಂಡರ್‌ಸನ್ ಈಗಾಗಲೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವೇಗದ ಬೌಲರ್ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಮೆಕ್‌ಗ್ರಾಥ್ (563), ವೆಸ್ಟ್ ಇಂಡೀಸ್‌ನ ಕರ್ಟ್ನಿ ವಾಲ್ಶ್ (519) ಮತ್ತು ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್ (514) ಅವರು ಆಂಡರ್‌ಸನ್ ಹಿಂದಿರುವ ವೇಗಿಗಳಾಗಿದ್ದಾರೆ.

    ಇನ್‌ಸ್ಟಾಗ್ರಾಂನಲ್ಲಿ ಮತ್ತೊಂದು ಮೈಲಿಗಲ್ಲು ನೆಟ್ಟ ವಿರಾಟ್ ಕೊಹ್ಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts