

ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರಜಾಪ್ರಭುತ್ವವನ್ನು ನಾಶಮಾಡುವವರನ್ನು ರಕ್ಷಿಸುತ್ತಿದ್ದಾರೆ ಎಂದು ಲೋಕಸಭಾ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ''ಚುನಾವಣಾ ಆಯೋಗ ಪ್ರಜಾಪ್ರಭುತ್ವದ ವಿಧ್ವಂಸಕವಾಗಿದೆ ಹಾಗೂ ಮತಗಳ್ಳರನ್ನು ರಕ್ಷಿಸುತ್ತಿದೆ'' ಎಂದಿದ್ದಾರೆ.
ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸುವ ಬದಲು, ಚುನಾವಣಾ ಆಯೋಗವು ಪಕ್ಷಪಾತದಿಂದ ವರ್ತಿಸುತ್ತಿದೆ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ದುರ್ಬಲಗೊಳಿಸಲು ಕಾರಣರಾದವರನ್ನು ರಕ್ಷಿಸುತ್ತಿದೆ ಎಂದು ರಾಹುಲ್ ಆರೋಪಿಸಿದರು.
2023ರ ವಿಧಾನಸಭಾ ಚುನಾಣೆಯಲ್ಲಿ ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,018 ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ವಂತ ಚಿಕ್ಕಪ್ಪನ ಮತವನ್ನು ಸಹ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಕಂಡುಕೊಂಡಾಗ ಈ ವಂಚನೆ ಆಕಸ್ಮಿಕವಾಗಿ ಬಹಿರಂಗವಾಯಿತು ಎಂದು ರಾಹುಲ್ ಹೇಳಿದರು.
ಈ ಮತದಾರರ ಗುರುತಿನ ಚೀಟಿಗಳನ್ನು ರಾಜ್ಯದ ಹೊರಗಿನಿಂದ ನಕಲಿ ಲಾಗಿನ್ಗಳು ಮತ್ತು ಫೋನ್ ಸಂಖ್ಯೆಗಳನ್ನು ಬಳಸಿ ಅಳಿಸಲಾಗಿದೆ. ಈ ಮತದಾರರ ಗುರುತಿನ ಚೀಟಿಗಳನ್ನು ವ್ಯಕ್ತಿಗಳಿಂದಲ್ಲ, ಬದಲಾಗಿ ಸಾಫ್ಟ್ವೇರ್ ಬಳಕೆ ಮತ್ತು ಕೇಂದ್ರೀಕೃತ ರೀತಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.