More

    65 ಕೋಟಿ ರೂ. ಅನುದಾನದಿಂದ ರಸ್ತೆಗಳ ಅಭಿವೃದ್ಧಿ

    ಹಾಸನ : ಪಿಡಬ್ಲ್ಯುಡಿ ಇಲಾಖೆ ಮೂಲಕ 65 ಕೋಟಿ ರೂ. ಅನುದಾನ ತಂದು ತಾಲೂಕು ವ್ಯಾಪ್ತಿಯ ಅಗತ್ಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.

    ಚನ್ನರಾಯಪಟ್ಟಣ ತಾಲೂಕಿನ ಡಿ.ತುಮಕೂರು ಗ್ರಾಮದಲ್ಲಿ ಮೈದುಂಬಿ ಹರಿಯುತ್ತಿರುವ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಶನಿವಾರ ಬಾಗಿನ ಸಮರ್ಪಿಸಿ ಮಾತನಾಡಿ, ವಿವಿಧ ಯೋಜನೆಗಳಡಿ ಹೆಚ್ಚು ಅನುದಾನ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.


    ಈ ಬಾರಿ ಪೂರ್ವ ಮುಂಗಾರಿನಿಂದಲೂ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಗ್ರಾಮೀಣ ಭಾಗದ ಬಹುತೇಕ ರಸ್ತೆಗಳು ಹಾಳಾಗಿವೆ. ಡಿಂಕ ಸೇರಿದಂತೆ ಒಂದೆರೆಡು ಕಡೆ ಸೇತುವೆ ಸಮೇತ ರಸ್ತೆಗಳು ಕೊಚ್ಚಿ ಹೋಗಿವೆ. ಇವುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕಲ್ಪಿಸುವಂತೆ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.


    ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅನುದಾನ ತಂದು ತಾಲೂಕು ವ್ಯಾಪ್ತಿಯ ಸುಮಾರು 400ಕ್ಕೂ ಹೆಚ್ಚು ಕಿ.ಮೀ. ರಸ್ತೆ ಅಭಿವೃದ್ಧಿ ಪಡಿಸಲಾಗಿದೆ. ತಾಲೂಕಿನ ನೀರಾವರಿ ಯೋಜನೆಯಲ್ಲಿಯೂ ಅವರ ಸಹಕಾರ ಮರೆಯುವಂತಿಲ್ಲ ಎಂದರು.


    ಎಂ.ಕಾಮನಘಟ್ಟ ಗ್ರಾಮದ ಪರಿಮಿತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಅಂಗನವಾಡಿ ಕೇಂದ್ರ ಹಾಗೂ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸೇತುವೆ ನಿರ್ಮಾಣಕ್ಕೆ ಶೀಘ್ರ ಅನುದಾನ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.


    ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಜಿ. ರಾಮಕೃಷ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ರಘುರಾಂ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಆರ್. ವಾಸು, ಪುಟ್ಟರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಿನೋದ, ಸದಸ್ಯರಾದ ಪಿ.ಕೆ. ಶಿವಶಂಕರ್, ಟಿ.ವಿ. ಆನಂದ್, ಕನ್ನಿಕಾ, ಪ್ರಮುಖರಾದ ನಿಂಗರಾಜ್, ಭರತ್, ಟಿ.ಡಿ. ಮನು, ಮಧು, ದಿಲೀಪು, ಮನು, ಪಾಟೀಲ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts