More

    ಕುಡಿಯುವ ನೀರಿನ ಯೋಜನೆಗೆ 65 ಕೋಟಿ ರೂಪಾಯಿ

    ಶಿಗ್ಗಾಂವಿ: ಪಟ್ಟಣವು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದು, ಭೌತಿಕವಾಗಿ ಬೆಳೆಯುತ್ತಿರುವ ನಗರವಾದ್ದರಿಂದ ಅದಕ್ಕೆ ತಕ್ಕಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಮುಖ್ಯವಾಗಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.


    ಪಟ್ಟಣದ ಶಬರಿನಗರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪುರಸಭೆ ಆಯೋಜಿಸಿದ್ದ ನಿರಂತರ ಒತ್ತಡಯುಕ್ತ ನೀರು ಸರಬರಾಜು ಯೋಜನೆಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.


    ಕ್ಷೇತ್ರದ ಜನತೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂಬ ಉದ್ದೇಶದಿಂದ 2013 ರಲ್ಲಿ ವರದಾ ನದಿಯಿಂದ ಪೈಪ್ ಲೈನ್ ಮೂಲಕ ನಾಗನೂರ ಕೆರೆಗೆ ನೀರು ಹರಿಸಿ, ಶುದ್ಧೀಕರಣ ಘಟಕದ ಮೂಲಕ ಶಿಗ್ಗಾಂವಿ, ಸವಣೂರ, ಬಂಕಾಪುರ ಪಟ್ಟಣಕ್ಕೆ ನೀರಿನ ಪೂರೈಕೆ ಮಾಡಲಾಗಿತ್ತು.

    ಈಗ ಶಿಗ್ಗಾಂವಿ ಪಟ್ಟಣಕ್ಕೆ 3-4 ದಿನಗಳಿಗೊಮ್ಮೆ ನೀರು ಸರಬರಾಜು ಮಾಡುವ ಉದ್ದೇಶ ಹೊಂದಲಾಗಿದೆ. ಹೊಸ ಪೈಪ್ ಲೈನ್ ಅಳವಡಿಸಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2 ಯೋಜನೆಯಡಿ 65 ಕೋಟಿ ರೂ.ಗಳ ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.


    ಕಾಮಗಾರಿ ನಿರ್ವಹಿಸುವಾಗ ಈಗಾಗಲೇ ಮಾಡಿದ ರಸ್ತೆ ಮತ್ತು ಕಾಂಕ್ರೀಟ್ ರಸ್ತೆಯನ್ನು ಹಾಳು ಮಾಡಬಾರದು. ಕಾಮಗಾರಿ ನಡೆಸಿದ ನಂತರ ರಸ್ತೆಯನ್ನು ಮೊದಲಿನ ರೂಪಕ್ಕೆ ಬರುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಶ್ರೀಕಾಂತ ದುಂಡಿಗೌಡ್ರ, ಶಿವಾನಂದ ಮ್ಯಾಗೇರಿ, ತಹಸೀಲ್ದಾರ್ ಸಂತೋಷ ಹಿರೇಮಠ, ಇಒ ಪ್ರಶಾಂತ ತುರಕಾಣಿ, ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ, ಕುಮಾರ ಜಿ.ಎಸ್ ಸೇರಿದಂತೆ ಪುರಸಭೆ ಸರ್ವ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts