ಒಂದೇ ಢಾಬಾದ 65 ಸಿಬ್ಬಂದಿಗೆ ಕರೊನಾ ಸೋಂಕು….! ಸೂಪರ್​ಸ್ಪ್ರೆಡರ್​ ಆಗುವ ಆತಂಕ

blank

ನವದೆಹಲಿ: ಕಳೆದ ವಾರದವರೆಗೂ ಅಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿತ್ತು. ವೀಕೆಂಡ್​ನಲ್ಲಿ ಎರಡು ದಿನ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು.
ಆದರೆ, ಅನ್​ಲಾಕ್​ 4 ಘೋಷಣೆಯಾಗುತ್ತಿದ್ದಂತೆ ಹರಿಯಾಣದಲ್ಲೂ ನಿರ್ಬಂಧಗಳನ್ನು ಸಡಿಲಿಸಲಾಗಿತ್ತು. ಇದೀಗ ಮತ್ತೆ ಕರೊನಾ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಅದರಲ್ಲೂ ಒಂದೇ ಢಾಬಾದ 65 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಹರಿಯಾಣದ ಮುರ್ಥಾಲ್​ ಎಂಬಲ್ಲಿನ ಪ್ರಸಿದ್ಧ ಸುಖದೇವ್​ ಢಾಬಾದ 65 ಸಿಬ್ಬಂದಿ ಕರೊನಾ ಪಾಸಿಟಿವ್​ ಆಗಿದ್ದಾರೆ. ಸೋಂಕಿಗೆ ಒಳಗಾದ ಯಾವ ಸಿಬ್ಬಂದಿಯಲ್ಲೂ ರೋಗ ಲಕ್ಷಣಗಳು ಇಲ್ಲದಿರುವುದರಿಂದ ಎಲ್ಲರನ್ನೂ ಹೋಮ್ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ; ಕರೊನಾ; ಭಾರತದಲ್ಲಿ ಪ್ರತಿದಿನ ಸೃಷ್ಟಿಯಾಗುತ್ತಿದೆ ಒಂದು ‘ಚೀನಾ’…! 

ಮುನ್ನೆಚ್ಚರಿಕೆ ಕ್ರಮವಾಗಿ ಢಾಬಾವನ್ನು ಎರಡು ದಿನಗಳ ಕಾಲ ಮುಚ್ಚಲಾಗಿದೆ. ಸೋಂಕು ನಿವಾರಕವನ್ನು ಸಿಂಪಡಿಸಲಾಗಿದೆ. ಜತೆಗೆ, ಢಾಬಾದಲ್ಲಿ ಕೆಲಸ ಮಾಡುತ್ತಿರುವ ಇತರ ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುರ್ಥಾಲ್​ನ ಅಮ್ರಿಕ್​ ಸುಖ್​ದೇವ್​ ಢಾಬಾ ಅತಿ ದೊಡ್ಡ ಢಾಬಾಗಳಲ್ಲಿ ಒಂದಾಗಿದ್ದು, ಹರಿಯಾಣಾ- ದೆಹಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿದೆ. ಈ ಪ್ರದೇಶದಲ್ಲಿ ಅತಿ ಹೆಚ್ಚು ಊಟೋಪಚಾರದ ಕೇಂದ್ರಗಳಿವೆ. ಹೆದ್ದಾರಿಯಲ್ಲಿ ಸಾಗುವ ಪ್ರಯಾಣಿಕರನ್ನು ಹೆಚ್ಚು ಸಂಖ್ಯೆಯಲ್ಲಿ ಆಕರ್ಷಿಸುತ್ತದೆ. ಅಧಿಕಾರಿಗಳಿಗೆ ಸಹಜವಾಗಿಯೇ ಆತಂಕ ಶುರುವಾಗಿದೆ.

ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ; 50 ರಾಜ್ಯಗಳಿಗೆ ಸೂಚನೆ ನೀಡಿದ್ಯಾರು?

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…