More

    ಮೇ.19ರಂದು 6ನೇ ತರಗತಿಗೆ ಪ್ರವೇಶ ಪರೀಕ್ಷೆ: ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ

    ಮಂಡ್ಯ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆ ಮತ್ತು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಮೇ.19ರಂದು ಪರೀಕ್ಷೆ ನಡೆಯಲಿದೆ.
    ಆಸಕ್ತ ವಿದ್ಯಾರ್ಥಿಗಳು ಪರೀಕ್ಷೆಗೆ ಸಂಬಂಧಪಟ್ಟಂತೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಂತೆಯೇ ಜಿಲ್ಲೆಯನ್ನು ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ತಾವು ಅರ್ಜಿ ಸಲ್ಲಿಸಿರುವ ವಸತಿ ಶಾಲೆಯಲ್ಲಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ಮೇ.19ರಂದು ಸೆಂಟ್ ಜಾನ್ಸ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts