More

    ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 7 ಸಾವು, 50 ಮನೆಗಳು ಸುಟ್ಟು ಭಸ್ಮ

    ಭೋಪಾಲ್​: ಅಕ್ರಮ ಪಟಾಕಿ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಏಳು ಮಂದಿ ಮೃತಪಟ್ಟು, ನೂರಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡು, 50ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿದೆ.

    ಸ್ಫೋಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, 30-35 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಗ್ನಿಶಾಮಕ ಇಲಾಖೆಯವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

    ಇದನ್ನೂ ಓದಿ: ಟೆಸ್ಟ್​ ಪಂದ್ಯದ ಕಾಮೆಂಟರಿ ವೇಳೆ ದಿಢೀರ್​ ಹೊರನಡೆದ ಸುನೀಲ್​ ಗಾವಸ್ಕರ್​; ಕಾರಣ ಹೀಗಿದೆ

    ಈ ಕುರಿತು ಪ್ರತಿಕ್ರಿಯಿಸಿರುವ ಹರ್ದಾ ಜಿಲ್ಲಾಧಿಕಾರಿ ರಿಷಿ ಗಾರ್ಗ್​, ಹರ್ದಾ ಜಿಲ್ಲೆಯ ಮಗರ್ಧ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದು, ಪಟಾಕಿಗಾಗಿ ಸಂಗ್ರಹಿಸಿಟ್ಟಿದ್ದ ಗನ್‌ಪೌಡರ್‌ಗೆ ಬೆಂಕಿ ತಗುಲಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, 30-35 ಜನರ ಸ್ಥಿತಿ ಚಿಂತಾಜನಕವಾಗಿದೆ.

    ಭೋಪಾಲ್​ನಿಂದ್​ ವೈದ್ಯರ ತಂಡ ಆಗಮಿಸುತ್ತಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಖಾನೆಯನ್ನು ಅಕ್ರಮವಾಗಿ ನಡೆಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಪ್ರಾಥಮಿಕ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹರ್ದಾ ಜಿಲ್ಲಾಧಿಕಾರಿ ರಿಷಿ ಗಾರ್ಗ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts