More

    ಔಷಧ ಘಟಕದಲ್ಲಿ ಭಾರಿ ಸ್ಫೋಟ; 7 ಮಂದಿ ಸಾವು, 10 ಜನರ ಸ್ಥಿತಿ ಗಂಭೀರ

    ಹೈದ್ರಾಬಾದ್​:  ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

    ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಹಲವರು ಸಿಕ್ಕಿಬಿದ್ದಿದ್ದು, ರಕ್ಷಿಸುವ ಕಾರ್ಯ ನಡೆಯುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎನ್ನಲಾಗಿದೆ.

    ಸುತ್ತಮುತ್ತಲಿನ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಯಿಂದಾಗಿ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಮೃತರಲ್ಲಿ ಬಿಹಾರ ನಾಲ್ವರು ಕಾರ್ಮಿಕರೂ ಇದ್ದಾರೆ. ರಿಯಾಕ್ಟರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

    ಆವರಣದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಸಂತ್ರಸ್ತರನ್ನು ಗುರುತಿಸಲು ಕಾರ್ಮಿಕರು ಹರಸಾಹಸ ಪಡಬೇಕಾಯಿತು. ಕೆಲವು ಕಾರ್ಮಿಕರು ಕಾರ್ಖಾನೆಯಿಂದ ಓಡಿಹೋದರು.

    “ಒಂದು ರಿಪ್ಲೇ ಕೊಡಿ ಸಾಕು” ಎಂದು ಮನವಿ ಮಾಡಿದ ಅಭಿಮಾನಿ; ಕಿಚ್ಚ ರಿಪ್ಲೈ​ ಮಾಡಿದಾಗ ಓದಲು ಆತನೇ ಬದುಕಿಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts