More

    ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ಸೋತಿದ್ದಕ್ಕೆ ಸಂಭ್ರಮಾಚರಣೆ; ಕಾಶ್ಮೀರದಲ್ಲಿ 7 ವಿದ್ಯಾರ್ಥಿಗಳು ಅರೆಸ್ಟ್

    ಶ್ರೀನಗರ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ತಂಡ ಸೋತಾಗ ಇಡೀ ದೇಶವೇ ದುಃಖದಲ್ಲಿ ಮುಳುಗಿತ್ತು. ಆದರೆ, ಕೆಲ ಕಿಡಿಗೇಡಿಗಳು ಭಾರತದ ಸೋಲನ್ನು ಸಂಭ್ರಮಿಸಿರುವ ಘಟನೆ ನಡೆದಿದ್ದು, ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

    ಘಟನೆಯು ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿರುವ ಶೇರ್-ಎ-ಕಾಶ್ಮೀರ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ವಿಶ್ವವಿದ್ಯಾಲಯದ ಹಾಸ್ಟೆಲ್​ನಲ್ಲಿ ಸುಮಾರು 300 ಜನರು ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಈ ಪೈಕಿ ಹೆಚ್ಚಿನವರು ಪಂಜಾಬ್, ರಾಜಸ್ಥಾನ ಹಾಗೂ ನೆರೆಯ ರಾಜ್ಯದವರಾಗಿದ್ದಾರೆ. ನವೆಂಬರ್​ 19ರಂದು ನಡೆದ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ಸೋತ ಬಳಿಕ ಸ್ಥಳೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು.

    ಇದನ್ನೂ ಓದಿ: ಲಾಂಚ್​ಗೂ ಮುನ್ನವೇ ರೋಲ್​ ರಾಯ್ಸ್​ ಸ್ಪೆಕ್ಟರ್​ ಕಾರು ಖರೀದಿಸಿದ ಬಿಲ್ಡರ್; ಈ ಕಾರಣಕ್ಕೆ ಸ್ವ್ಯಾಗ್​ ಎಂದ ನೆಟ್ಟಿಗರು

    ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಕಾಲೇಜಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದ 7 ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರ ವಿರುದ್ಧ UAPA, ಭಾರತ ದಂಡ ಸಂಹಿತೆ (IPC Section) 505ರ ಅಡಿ ಪ್ರಕರಣ ದಾಖಲಿಸಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ವಿದ್ಯಾರ್ಥಿಗಳ ಬಂಧನ ಕುರಿತು ಪ್ರತಿಕ್ರಿಯಿಸಿರುವ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ, ಇದೊಂದು ಆಘಾತಕಾರಿ ವಿಚಾರವಾಗಿದ್ದು, ಸಮಾಜದಲ್ಲಿ ಗೊಂದಲವನ್ನುಂಟು ಮಾಡುವ ಸಂಗತಿಯಾಗಿದೆ. ಕೂಡಲೇ ಲೆಫ್ಟಿನೆಂಟ್​ ಗವರ್ನರ್​​ ಈ ವಿಚಾರದಲ್ಲಿ ಮಧ್ಯಪ್ರದೇಶಿಸಿ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts