

ಅಹಮದಾಬಾದ್: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡು ಸಾವನಪ್ಪಿರುವ ಘಟನೆ ಗುಜರಾತಿನ ಸೂರತ್ ನಗರದಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ನೋಟ್ ಒಂದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸೂರತ್ ಡಿಸಿಪಿ ರಾಕೇಶ್ ಬರೋಟ್, ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಸೂರತ್ ಡಿಸಿಪಿ ರಾಕೇಶ್ ಬರೋಟ್ ತಿಳಿಸಿದ್ದಾರೆ.