ಭೀಕರ ಅಪಘಾತ; ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರಕ್​ಗೆ ಮಿನಿ ಟ್ರಕ್​ ಡಿಕ್ಕಿ, 7 ಮಂದಿ ಮೃತ್ಯು

7 of West Bengal end life in Road Accident in Jajpur
Published on

ಒಡಿಶಾ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಮಿನಿ ಟ್ರಕ್​ ಡಿಕ್ಕಿಯಾಗಿ ಏಳು ಜನ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಈ ಘಟನೆ ಒಡಿಶಾದ ಜಾಜ್‌ಪುರದಲ್ಲಿ ನಡೆದಿದೆ.

ಕೋಲ್ಕತ್ತಾ ಕಡೆಯಿಂದ ಏಳು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್​​ ನ್ಯೂಲ್ಪರ್​ ಪ್ರದೇಶದ ಸೇಂಟ್ರಲ್​​ ಬ್ಯಾಂಕ್​​ ಬಳಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ಟ್ರಕ್​​ ಕೆಟ್ಟು ನಿಂತಿತ್ತು ಎಂದು ವರದಿಯಾಗಿದೆ. ಡಿಕ್ಕಿ ಸಂಭವಿಸಿದ ಬಳಿಕ ಮಿನಿ ಟ್ರಕ್​ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಲ್ಲೇ ರಸ್ತೆ ಮೇಲೆ ನಿಂತಿದ್ದ ಬಾಲಕ ಮತ್ತು ಕ್ಲಿನರ್​ ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಭೀಕರ ಅಪಘಾತದ ವೇಳೆ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದರು ಮತ್ತು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲ್ಪಟ್ಟ ಇನ್ನೊಬ್ಬರು ಸಹ ಸಾವನ್ನಪ್ಪಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಧರ್ಮಶಾಲಾ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. 'ನಾವು ಶವಗಳ ಗುರುತು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಮರಣೋತ್ತರ ಪರೀಕ್ಷೆ ನಡೆಸಲಾಗುವುದು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರೆಲ್ಲರೂ ಕೋಲ್ಕತ್ತಾ ಮತ್ತು ಅದರ ಅಮೀಪದ ಪ್ರದೇಶಗಳಿಗೆ ಸೇರಿದವರು ಎಂದು ವರದಿಯಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net