More

    7 ರೂ. ಪ್ರೋತ್ಸಾಹಧನ ಬಿಡುಗಡೆಗೊಳಿಸಿ

    ಚಿಕ್ಕಮಗಳೂರು: ಹಾಲು ಉತ್ಪಾದಕ ರೈತರಿಗೆ ಸರ್ಕಾರ ನೀಡಿದ ಭರವಸೆಯಂತೆ ಪ್ರತಿ ಲೀಟರ್ ಹಾಲಿಗೆ ಏಳು ರೂಪಾಯಿಯಂತೆ ಪ್ರೋತ್ಸಾಹಧನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹಸುಗಳೊಂದಿಗೆ ಬಂದು ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ಭ್ರಷ್ಟಾಚಾರದಲ್ಲಿ ಮುಳುಗಿದೆ. ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡದೆ ವಂಚಿಸುತ್ತಿದೆ ಎಂದು ಆರೋಪಿಸಿದರು.
    ಹಾಲು ಉತ್ಪಾದಕ ರೈತರಿಗೆ ಐದು ರೂಪಾಯಿ ಬದಲಿಗೆ ಏಳು ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಐದು ರೂಪಾಯಿಯನ್ನೇ ನೀಡಿಲ್ಲ. ಬಾಕಿ ಪ್ರೋತ್ಸಾಹ ಧನ 715 ಕೋಟಿ ರೂ. ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
    ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದು ಹೇಳುತ್ತ ಜನರನ್ನು ವಂಚಿಸುತ್ತಿದೆ. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ರಾಜ್ಯದ ಬೊಕ್ಕಸ ಖಾಲಿ ಮಾಡಲಾಗಿದೆ. ಜನರೇ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಸರ್ಕಾರದ ಪರಿಸ್ಥಿತಿ ಬದಲಾಗಲಿದೆ ಎಂದು ಹೇಳಿದರು.
    ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಆನಂದಪ್ಪ, ಜಿಲ್ಲಾ ವಕ್ತಾರ ಟಿ.ರಾಜಶೇಖರ್, ಪ್ರಮುಖರಾದ ಸಂತೋಷ್ ಕೋಟ್ಯಾನ್, ಪುಷ್ಪರಾಜ್, ರಾಜಪ್ಪ, ನಾರಾಯಣ ಗೌಡ, ಕೆ.ಆರ್.ಮಹೇಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts