ಕರಾಟೆಯಲ್ಲಿ 7 ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

karate
ಕರಾಟೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಕಾರ್ಕಳ ಕ್ರೈಸ್ಟ್‌ಕಿಂಗ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು.
Published on

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಬೈಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಆಂಗ್ಲ ವಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಒಟ್ಟು ಏಳು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗದಿಂದ ಒಂಭತ್ತನೇ ತರಗತಿಯ ಆಯುಶ್ರೀ ಎಂ.ಆಚಾರ್ಯ, ಸಾನ್ವಿ ಎಂ.ನಾಯಕ್, ಎಂಟನೇ ತರಗತಿಯ ಸುದೀಕ್ಷಾ, ಅದ್ವಿತ್ ಡಿ.ವಿ., ನಾಗೇಶ್ ಭಟ್ ಮತ್ತು ಪ್ರಾಥಮಿಕ ವಿಭಾಗದ ಏಳನೇ ತರಗತಿಯ ಅಕ್ಷಯ್ ಪ್ರಭು, ಶಾರ್ವಿ ಬಾಲಕೃಷ್ಣ ಪೂಜಾರಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂಭತ್ತನೇ ತರಗತಿಯ ಲಕ್ಷಣ್ಯ ಪಿ.ಆರ್., ಶಗುನ್ ಎಸ್.ವರ್ಮ, ಹತ್ತನೇ ತರಗತಿಯ ಅಬ್ದುಲ್ ಅಝೀಝ್ ಸಫ್ವಾನ್ ಮತ್ತು ಡೇನಿಯಲ್ ಟಿ.ಕೆ. ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಹಾಗೂ ಅಧ್ಯಾಪಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net