More

    70 ಪೊಲೀಸರಿಗೆ ಕರೊನಾ ಸೋಂಕು – ಡಿಸಿಪಿ ಡಾ.ವಿಕ್ರಂ ಆಮ್ಟೆ


    ಬೆಳಗಾವಿ: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 70 ಪೊಲೀಸರು ಮತ್ತು ಇಬ್ಬರು ಗೃಹರಕ್ಷಕ ದಳ ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿದೆ. 30 ಜನ ಗುಣಮುಖರಾಗಿದ್ದು, ಹಂತ ಹಂತವಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ ಎಂದು ಡಿಸಿಪಿ ಡಾ.ವಿಕ್ರಂ ಆಮ್ಟೆ ತಿಳಿಸಿದ್ದಾರೆ.

    ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಂ ಕ್ವಾರಂಟೈನ್‌ನಲ್ಲಿರುವ 40 ಪೊಲೀಸರ ಆರೋಗ್ಯ ವಿಚಾರಣೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿ ನಿಯೋಜಿಸಲಾಗಿದೆ.

    ಸೋಂಕಿತರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಲಾಕ್‌ಡೌನ್ ನಿಯಮ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪೊಲೀಸರು ಶ್ರಮಿಸುತ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಅನಗತ್ಯವಾಗಿ ಸಂಚರಿಸುವವರಿಗೆ ದಂಡ ವಿಧಿಸಲಾಗುತ್ತಿದೆ. ಸುರಕ್ಷತಾ ದೃಷ್ಟಿಯಿಂದ ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಗ್ಲೌಸ್ ವಿತರಿಸಲಾಗಿದೆ. ಕರೊನಾ ನಿಯಂತ್ರಣ ಮಾರ್ಗಸೂಚಿ ಪಾಲಿಸುವಂತೆ ತಿಳಿವಳಿಕೆ ಮೂಡಿಸಲಾಗಿದೆ ಎಂದು ಡಾ. ಆಮ್ಟೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts