More

    ದ್ವಿತೀಯ ಪಿಯು ಪರೀಕ್ಷೆ ಮೊದಲ ದಿನ 753 ವಿದ್ಯಾರ್ಥಿಗಳು ಗೈರು

    ಚಿತ್ರದುರ್ಗ: ಜಿಲ್ಲೆಯ 23 ಕೇಂದ್ರಗಳಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಕನ್ನಡ ವಿಷಯದ ಪರೀಕ್ಷೆಗೆ 753 ವಿದ್ಯಾರ್ಥಿ ಳು ಗೈರಾಗಿದ್ದಾರೆ. ನೋಂದಾಯಿಸಿಕೊಂಡಿದ್ದ 13,368 ಪೈಕಿ 12,615 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
    ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ. ಮಾರ್ಚ್ 10ರಂದು ಯಾವುದೇ ಪರೀಕ್ಷೆ ಇರುವುದಿಲ್ಲ. ಮಾರ್ಚ್ 11ರಂದು ಗ ಣಿತ ಮತ್ತು ಶಿಕ್ಷಣಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.
    ಪರೀಕ್ಷೆ ಹಿನ್ನೆಲೆಯಲ್ಲಿ ನಗರದ ವಿವಿಧ ಕೇಂದ್ರಗಳಿಗೆ ಡಿಸಿ ಜಿಆರ್‌ಜೆ ದಿವ್ಯಾಪ್ರಭು ಭೇಟಿ ನೀಡಿ ಪರಿಶೀಲಿಸಿದರು. ನಗರದ ಬಾಲಕಿಯ ರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಸಂತ ಜೋಸೆಫ್ ಕಾನ್ವೆಂಟ್ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲಿ ಆಸನ, ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಇತ್ಯಾದಿ ಅಗತ್ಯ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಇದೆ ವೇಳೆ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದರು. ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts