More

    ಸರ್ವರಿಗೂ ಸಂವಿಧಾನದಿಂದ ರಕ್ಷಣೆ

    ಮದ್ದೂರು: ಭಾರತ ಸಂವಿಧಾನ ಸರ್ವರಿಗೂ ಸಮಾನತೆಯನ್ನು ಒದಗಿಸಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

    ಪಟ್ಟಣದ ಶಿವಪುರದ ಧ್ವಜಾ ಸತ್ಯಾಗ್ರಹಸೌಧದಲ್ಲಿ ಶುಕ್ರವಾರ ಎಚ್.ಕೆ.ವೀರಣ್ಣಗೌಡ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಆಯೋಜಿಸಿದ್ದ 75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿರುವ ಸಂವಿಧಾನ ನಮಗೆ ಬಹುದೊಡ್ಡ ಶಕ್ತಿಯಾಗಿದೆ. ಸಮಾಜದ ಎಲ್ಲರನ್ನೂ ರಕ್ಷಿಸುತ್ತಿದೆ ಎಂದರು.

    ಶಿವಪುರದ ಧ್ವಜ ಸತ್ಯಾಗ್ರಹದ ಅಭಿವೃದ್ಧಿಗೆ ಈಗಾಗಲೇ ಸಮಿತಿ ರಚಿಸಲಾಗಿದ್ದು, ಸ್ವಲ್ಪ ಹಣವನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿ ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿಯನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವಂತಹ ಕೇಂದ್ರವಾಗಿ ರೂಪಿಸಲಾಗುವುದು ಎಂದು ತಿಳಿಸಿದರು.

    ಹಿರಿಯ ಸ್ವಾತಂತ್ರ ಹೋರಾಟಗಾರ ಕೆ.ಟಿ.ಚಂದು, ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ಸ್ವರೂಪ್‌ಚಂದ್, ಕಾರ್ಯದರ್ಶಿ ಸಿ.ಅಪೂರ್ವ ಚಂದ್ರು , ಸಂಸ್ಥೆಯ ನಿರ್ದೇಶಕರಾದ ಮಲ್ಲಿಕಾರ್ಜುನ್, ಎಂ.ಎ.ರಾಮಲಿಂಗಯ್ಯ, ಇನ್ನರ್ ವ್ಹೀಲ್ ಸಂಸ್ಥೆಯ ಅಧ್ಯಕ್ಷೆ ಕಲಾವತಿ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಪಿ.ಸ್ವಾಮಿ , ಚುಂಚಶ್ರೀ ಒಕ್ಕಲಿಗರ ವೇದಿಕೆ ಅಧ್ಯಕ್ಷ ಬಿ.ಕೃಷ್ಣಪ್ಪ, ಪ್ರಾಂಶುಪಾಲರಾದ ಜಿ.ಎಸ್.ಶಂಕರೇಗೌಡ, ಯು.ಎಸ್.ಶಿವಕುಮಾರ್, ಉಪಪ್ರಾಂಶುಪಾಲರಾದ ಪ್ರಕಾಶ್, ನಂದಿನಿ, ಮುಖ್ಯಶಿಕ್ಷಕರಾದ ಎನ್.ಕೃಷ್ಣ, ಎಂ.ಟಿ.ಚಂದ್ರಶೇಖರ್, ಜಿ.ಅನಿತಾ ಕೆ.ಎಸ್.ವರದರಾಜು, ಆಡಳಿತ ಅಧಿಕಾರಿ ಯು.ಎಸ್.ರವಿ, ಎನ್‌ಎಸ್‌ಎಸ್ ಅಧಿಕಾರಿಗಳಾದ ಎಚ್.ಎಸ್. ಪಂಚಲಿಂಗೇಗೌಡ , ಎ.ವಿ.ಪ್ರದೀಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts