78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ; ದೇಶ ಸ್ವಾತಂತ್ರ್ಯ ಹೋರಾಟಗಾರರಿಗೆ ಋಣಿ: ಪ್ರಧಾನಿ ಮೋದಿ

ನವದೆಹಲಿ: ಇಂದು ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, 11ನೇ ಬಾರಿಗೆ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಮತ್ತು ಹೋರಾಡಿದ ಅಸಂಖ್ಯಾತ ಜನರಿಗೆ ಗೌರವ ಸಲ್ಲಿಸುವ ದಿನ ಇದಾಗಿದೆ ಎಂದರು.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಯಂದೇ ಕಹಿ ಸುದ್ದಿ! ವಿನೇಶ್​ ಫೋಗಟ್​ ಬೆಳ್ಳಿ ಕನಸು ಭಗ್ನ

ಕೆಂಪು ಕೋಟೆಯ ಆವರಣದಲ್ಲಿ 11ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ತೊಡಗಿದ ಪ್ರಧಾನಿ ಮೋದಿ, “ವಿಕಸಿತ ಭಾರತ 140 ಕೋಟಿ ಜನರ ಸಂಕಲ್ಪ ಮತ್ತು ಕನಸುಗಳ ಪ್ರತಿಬಿಂಬವಾಗಿದೆ. ‘ನಮ್ಮ ಸಂಕಲ್ಪ’ದೊಂದಿಗೆ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಜನರು ಸಮರ್ಥರಾಗಿದ್ದಾರೆ” ಎಂದು ತಿಳಿಸಿದರು.

“ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಿಗೆ ದೇಶ ಋಣಿಯಾಗಿದೆ. ಸ್ವಾತಂತ್ರ್ಯ ಪಡೆಯಲು ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು 40 ಕೋಟಿ ಜನರು ಮುಂದಾಗಿದ್ದರು ಎಂದರೆ ಇನ್ನೂ 140 ಕೋಟಿ ಜನರ ಸಂಕಲ್ಪದಿಂದ ನಾವು ಏನನ್ನು ಸಾಧಿಸಬಹುದು ಎಂದು ಊಹಿಸಿ” ಎಂದು ಪ್ರಧಾನಿ ನುಡಿದರು.

‘ಸುರಕ್ಷತೆ ಇಲ್ಲ, ಕರ್ತವ್ಯ ನಿರ್ವಹಿಸಲ್ಲ’: ಮಧ್ಯರಾತ್ರಿ ವೈದ್ಯರ ಧರಣಿ ! ಪ್ರತಿಭಟನೆ ವೇಳೆ ಕಿಡಿಗೇಡಿಗಳ ದಾಳಿ

ಸ್ವಾತಂತ್ರ್ಯ ದಿನಾಚರಣೆಯಂದೇ ಕಹಿ ಸುದ್ದಿ! ವಿನೇಶ್​ ಫೋಗಟ್​ ಬೆಳ್ಳಿ ಕನಸು ಭಗ್ನ

Share This Article

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…