ಕಮರಿಗೆ ಉರುಳಿದ ಪಿಕಪ್​ ವಾಹನ; ಎಂಟು ಮಂದಿ ಸಾವು

Accident
Published on

ನೈನಿತಾಲ್: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್​ ವಾಹನವೊಂದು ಚಾಲಜನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡ್​ನ ನೈನಿತಾಲ್ ಜಿಲ್ಲೆಯ ಚೆಡಾಖಾನ್-ಮಿದರ್ ರಸ್ತೆಯಲ್ಲಿ ನಡೆದಿದೆ.

ಪಟ್ಲೋಟ್‌ನಿಂದ ಅಮ್ಜದ್ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ ಘಟನೆ ಶುಕ್ರವಾರ ಸಂಭವಿಸಿದ್ದು, ಎದುರು ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆಯಲು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಪಿಕಪ್​ ವಾಹನ ಕಮರಿಗೆ ಉರುಳಿದೆ. ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ ತಿಳಿಸಿದ್ದಾರೆ.

ದುರ್ಘಟನೆ ಕುರಿತು ಸಂತಾಪ ಸೂಚಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳನ್ನು ಓಖಲಕಂಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net