ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

KA Ministers
Published on

ಬೆಂಗಳೂರು: ಕಾಂಗ್ರೆಸ್ ಪಕ್ಷ, ಕರ್ನಾಟಕದಲ್ಲಿ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ. ಈಗಾಗಲೇ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಗಾದಿಗಾಗಿ ಜಟಾಪಟಿ ನಡೆದಿದ್ದು ಕುರುಬರ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಪಡೆದಿದ್ದಾರೆ. ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಎಂಟು ಜನ ಶಾಸಕರು ಸಚಿವ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದ್ದು ಖಾತೆಗಳು ಹಂಚಿಕೆ ಇನ್ನಷ್ಟೇ ನಡೆಯಬೇಕಾಗಿದೆ.

ಎಂಟು ಸಚಿವರು ಯಾರು?

  1. ಎಂ. ಬಿ. ಪಾಟೀಲ್ (ಲಿಂಗಾಯತ)
  2. ಡಾ. ಜಿ. ಪರಮೇಶ್ವರ್ (ದಲಿತ ಬಲ)
  3. ಪ್ರಿಯಾಂಕ ಖರ್ಗೆ (ದಲಿತ ಬಲ)
  4. ಕೆ.ಎಚ್. ಮುನಿಯಪ್ಪ (ದಲಿತ ಎಡ)
  5. ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)
  6. ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)
  7. ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)
  8. ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)

ಇಂದು ಸಿದ್ದು ಡಿಕೆಶಿ ಸೇರಿದಂತೆ ಇತರ ಎಂಟು ಜನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶಾದ್ಯಂತ ಸೊರಗಿರುವ ಕಾಂಗ್ರೆಸ್​ಗೆ ಕರ್ನಾಟಕದ ಚುನಾವಣೆ ಬಲ ನೀಡಿದ್ದು ಸಿದ್ದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಭಾಗವಹಿಸಿದ್ದಾರೆ.

ಪದಗ್ರಹಣ ಸಮಾರಂಭದಲ್ಲಿ ಪ್ರಮುಖವಾಗಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್​, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್, ನಟ ಕಮಲ್​ ಹಾಸನ್​, ನಟ ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ರಾಜೇಂದ್ರ ಸಿಂಗ್​ ಬಾಬು, ದುನಿಯಾ ವಿಜಯ್​, ನಟಿ ರಮ್ಯಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net