More

  ಸಿದ್ದು, ಡಿಕೆಶಿ ಜತೆ 8 ಸಚಿವರಿಂದ ಪ್ರಮಾಣ ವಚನ: ಮೊದಲ ಸಚಿವ ಸಂಪುಟದಲ್ಲಿ 6 ಸಮುದಾಯಕ್ಕೆ ಅವಕಾಶ

  ಬೆಂಗಳೂರು: ಇಂದು 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿದ್ದು ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಸಿಎಂ, ಡಿಸಿಎಂ ಜತೆ ಎಂಟು ಸಚಿವರೂ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

  28 ಸಚಿವರ ಆಯ್ಕೆಗೆ ಭಾರೀ ಕಸರತ್ತು ನಡೆಸಲಾಯಿತು. ಆದರೆ, ಅಂತಿಮವಾಗಿ ಮೊದಲ ಸಚಿವ ಸಂಪುಟಕ್ಕೆ ಕೇವಲ ಎಂಟು ಮಂದಿಯನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಸದ್ಯ ಆರು ಸಮುದಾಯಕ್ಕೆ ಅವಕಾಶ ನೀಡಲಾಗಿದೆ. ಐದು ಸಮುದಾಯಕ್ಕೆ ತಲಾ ಒಂದೊಂದು ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ದಲಿತ ಸಮುದಾಯಕ್ಕೆ ಮೂರು ಸ್ಥಾನ, ಅದರಲ್ಲಿ ದಲಿತ ಬಲ ಸಮುದಾಯಕ್ಕೆ ಎರಡು ಹಾಗೂ ದಲಿತ ಎಡ ಸಮುದಾಯಕ್ಕೆ ಒಂದು ಸಚಿವ ಸ್ಥಾನ ನೀಡಲಾಗಿದೆ.

  ಇದನ್ನೂ ಓದಿ: ಹೊಸ ಸರ್ಕಾರ, ಜನರ ನಿರೀಕ್ಷೆಗಳು ಅಪಾರ; ಗ್ಯಾರಂಟಿಗಳ ಕ್ಷಿಪ್ರ ಅನುಷ್ಠಾನಕ್ಕೆ ಜನರ ಕಾತರ

  ಎಂಟು ಸಚಿವರು ಯಾರು?

  * ಎಂ. ಬಿ. ಪಾಟೀಲ್ (ಲಿಂಗಾಯತ)
  * ಡಾ. ಜಿ. ಪರಮೇಶ್ವರ್ (ದಲಿತ ಬಲ)
  * ಪ್ರಿಯಾಂಕ ಖರ್ಗೆ (ದಲಿತ ಬಲ)
  * ಕೆ.ಎಚ್. ಮುನಿಯಪ್ಪ (ದಲಿತ ಎಡ)
  * ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)
  * ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)
  * ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)
  * ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)

  8 New Ministers

  ನಿನ್ನೆ ಮಧ್ಯಾಹ್ನದಿಂದ ಸಚಿವರ ಆಯ್ಕೆಗೆ ಭಾರೀ ಕಸರತ್ತು ನಡೆಯಿತು. ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ನಿವಾಸದಲ್ಲಿ ತಡರಾತ್ರಿ ಎರಡು ಗಂಟೆಯವರೆಗೆ ಹೈವೋಲ್ಟೇಜ್​ ಸಭೆ ನಡೆಯಿತು. ಜಾತಿವಾರು, ಹಿರಿತನದ ಆಧಾರ ಮೇಲೆ ಸಚಿವರನ್ನು ಆಯ್ಕೆ ಮಾಡಲಾಗಿದೆ. ಒಂದೇ ಬಾರಿಗೆ 28 ಸಚಿವರ ಆಯ್ಕೆಗೆ ಪ್ರಯತ್ನ ನಡೆಯಿತಾದರೂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಒಮ್ಮತ ಮೂಡಲಿಲ್ಲ. ಇದರಿಂದ ಸಭೆ ಮೇಲೆ ಸಭೆ ನಡೆಸಬೇಕಾಯಿತು. ಆದರೂ ಸಹಮತ ಮೂಡದ ಹಿನ್ನೆಲೆಯಲ್ಲಿ ಕೈ ಹೈಕಮಾಂಡ್ ಹೈರಾಣಾಯಿತು.

  ಇದನ್ನೂ ಓದಿ: ನಾರಾಯಣ ನೇತ್ರಾಲಯದ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ: ವ್ಯಾಯಾಮ ಮಾಡುತ್ತಿದ್ದಾಗ ಹೃದಯಾಘಾತ, ಕುಸಿದು ಬಿದ್ದು ಸಾವು

  ಸರ್ಕಾರದ ಮೇಲೆ ಪರಿಣಾಮ

  ಅಂತಿಮವಾಗಿ ಎಂಟು ಸಚಿವರಿಗೆ ಮಾತ್ರ ಉಭಯ ನಾಯಕರು ಒಪ್ಪಿಗೆ ನೀಡಿದರು. ಇಂದು ಕೇವಲ ಎಂಟು ಸಚಿವರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಚಿವ ಸಂಪುಟ ವಿಚಾರವಾಗಿ ಆರಂಭದಲ್ಲೆ ಸಿದ್ದು- ಡಿಕೆಶಿ ನಡುವೆ ಜಟಾಪಟಿ ಉಂಟಾಗಿದೆ. ಎರಡು ಪವರ್ ಸೆಂಟರ್ ನಡುವೆ ಶೀತಲ ಸಮರ ಏರ್ಪಟ್ಟಿದ್ದು, ಮುಂದೆ ಇದು ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. (ದಿಗ್ವಿಜಯ ನ್ಯೂಸ್​)

  ಇನ್ನು ಶಿವರಾಮಯ್ಯ ಸರ್ಕಾರ: ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಆಗಿ ಪ್ರಮಾಣ

  ವಿಜಯಾನಂದ ಟ್ರಾವೆಲ್ಸ್​ಗೆ ಟಾಟಾ ಬಸ್ ಹಸ್ತಾಂತರ: ಶಿವಾ ಸಂಕೇಶ್ವರ ಅವರಿಗೆ ಕೀ ನೀಡಿದ ಕೆ.ಗುರುಪ್ರಸಾದ್

  ಹೊಸ ಸರ್ಕಾರ, ಜನರ ನಿರೀಕ್ಷೆಗಳು ಅಪಾರ; ಗ್ಯಾರಂಟಿಗಳ ಕ್ಷಿಪ್ರ ಅನುಷ್ಠಾನಕ್ಕೆ ಜನರ ಕಾತರ

  ರಾಜ್ಯೋತ್ಸವ ರಸಪ್ರಶ್ನೆ - 22

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts