ಪ್ರಧಾನಿ ಮೋದಿ ಜನ್ಮದಿನಕ್ಕೆ ಭಾರತಕ್ಕೆ ಬರ್ತಿವೆ ಎಂಟು ಚೀತಾಗಳು

5026216
Published on

ನವದೆಹಲಿ: ಭಾರತದಲ್ಲಿ ಚೀತಾಗಳ ಸಂಖ್ಯೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ನಮೀಬಿಯಾ ದೇಶದಿಂದ ಚೀತಾಗಳನ್ನು ಕರೆತರಲಾಗುತ್ತಿದೆ. ಸೆ. 17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು ಈ ಚೀತಾಗಳನ್ನು ವಿನಿಮಯ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಭಾರತದಲ್ಲಿ ಚೀತಾಗಳ ಸಂಖ್ಯೆ ಹೆಚ್ಚಳವಾಗಬೇಕೆಂಬ ಕೂಗು ಕೇಳಿ ಬರುತ್ತಲೇ ಇತ್ತು. ಇದಕ್ಕಾಗಿ ನಮೀಬಿಯಾ ದೇಶದಿಂದ ಚೀತಾಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಲಾಗಿತ್ತು. ಈ ಪ್ರಯತ್ನದ ಫಲವಾಗಿ ಇದೀಗ ಭಾರತಕ್ಕೆ ಮೊದಲ ಹಂತದಲ್ಲಿ 8 ಚೀತಾಗಳು ಬರುತ್ತಿವೆ.

Koo App
Prime Minister Narendra Modi will release wild Cheetahs in Kuno National Park in Madhya Pradesh on Saturday under Project Cheetah, which is world’s first inter-continental large wild carnivore translocation project. Introduction of wild Cheetahs is part of Mr Modi’s efforts to revitalise and diversify India’s wildlife and its habitat. Cheetah was declared extinct from India in 1952. Cheetahs that will be introduced are from Namibia and have been brought under an MoU signed earlier this year.
View attached media content
-All India Radio News (@airnewsalerts)15 Sep 2022

5 ಗಂಡು ಹಾಗೂ 3 ಹೆಣ್ಣು ಚೀತಾಗಳು ನಮೀಬಿಯಾದಿಂದ ಭಾರತಕ್ಕೆ ಬರಲಿದೆ. ಸೆ.17 ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಜನ್ಮ ದಿನದ ಸಂದರ್ಭದಲ್ಲಿ ಈ ಚೀತಾಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲಿದ್ದಾರೆ.

ಚೀತಾಗಳನ್ನು ಕರೆತರಲು ಹೊರಟ ವಿಶೇಷ ವಿಮಾನ
ನಮೀಬಿಯಾದಿಂದ ಚೀತಾಗಳನ್ನು ಕರೆತರಲು ವಿಶೇಷ ವಿಮಾನವನ್ನು ಸಜ್ಜುಗೊಳಿಸಲಾಗಿದೆ. ಇದಕ್ಕಾಗಿ ವಿಮಾನದ ಮುಂಭಾಗದಲ್ಲಿ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯ ಚಿತ್ರ ಚಿತ್ರಿಸಲಾಗಿದೆ. ಇದೀಗ ನಮೀಬಿಯಾ ತಲುಪಿರುವ ಈ ವಿಮಾನದ ಚಿತ್ರವನ್ನು ನಮೀಬಿಯಾದಲ್ಲಿರುವ ಭಾರತದ ಹೈ ಕಮಿಷನ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net