More

    80 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು

    ಕಡೂರು: ತಾಲೂಕಿನ ಎಲ್ಲ ಗ್ರಾಮಗಳಿಗೂ ಜೆಜೆಎಂ ಯೋಜನೆಯಡಿ 80 ಕೋಟಿ ರೂ. ವೆಚ್ಚದಲ್ಲಿ ಜನತೆಗೆ ಕುಡಿಯುವ ನೀರು ಪೂರೈಸಲಾಗುವುದು. ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವ ಜವಾಬ್ದಾರಿ ಗ್ರಾಪಂ ಸದಸ್ಯರ ಮೇಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

    ಕುಪ್ಪಾಳು ಮತ್ತು ದೊಡ್ಡಪಟ್ಟಣಗೆರೆ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕುಪ್ಪಾಳು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ಸಹಜವಾಗಿ ಮೂಲಸೌಕರ್ಯ ನೀಡಬೇಕಾಗುತ್ತದೆ. ಗ್ರಾಮದ ಅಭಿವೃದ್ಧಿಯಲ್ಲಿ ನನ್ನ ಇತಿಮಿತಿಯಲ್ಲಿ ಸಂಪೂರ್ಣ ಸಹಕಾರ ನೀಡುತ್ತೇನೆ. ದೊಡ್ಡಪಟ್ಟಣಗೆರೆ ಗ್ರಾಮದಲ್ಲಿ ಐತಿಹಾಸಿಕ ದೇವಸ್ಥಾನ ಅಭಿವೃದ್ಧಿಗೆ ಪುರಾತತ್ವ ಇಲಾಖೆ ಗಮನಕ್ಕೆ ತಂದು ಕ್ರಮ ಕೈಗೊಳ್ಳುತ್ತೇನೆ ಎಂದರು.
    ಮತಿಘಟ್ಟ ಗ್ರಾಪಂ ಅಧ್ಯಕ್ಷ ರೇವಣ್ಣ, ಸದಸ್ಯ ಶ್ರೀಕಂಠ ಒಡೆಯರ್, ಮುಖಂಡರಾದ ಎಲ್.ಎಂ.ಪರಮೇಶ್, ನಂದೀಶ್ ಬಾಬು, ಕೃಷ್ಣಮೂರ್ತಿ, ಪಟ್ಟಣಗೆರೆ ಗ್ರಾಪಂ ಅಧ್ಯಕ್ಷೆ ಶಾಲಿನಿ ದಿನೇಶ್, ನಾಗರತ್ನಾ, ಶೋಭಾ ರವಿ, ವೆಂಕಟೇಶ್, ಸರಸ್ವತಿಪುರ ಗ್ರಾಪಂ ಅಧ್ಯಕ್ಷ ಕಂಸಾಗರ ಸೋಮಶೇಖರ್, ಪುಟ್ಟಪ್ಪ, ಲೋಕೇಶ್, ಹನುಮಂತಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts