ಐದು ಗ್ಯಾರಂಟಿಗೆ 81.91 ಕೋಟಿ ರೂಪಾಯಿ ವ್ಯಯ

blank

ಹಿರೇಕೆರೂರ: ಬಡ ಜನತೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಹಿರೇಕೆರೂರ ಹಾಗೂ ರಟ್ಟಿಹಳ್ಳಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷಿ್ಮ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಗಳು ಬಡ ಜನತೆಗೆ ಅನುಕೂಲ ಮಾಡುವ ಹಾಗೂ ಅವರ ಸಮಸ್ಯೆ ಪರಿಹರಿಸುವ ಕಾರ್ಯಕ್ರಮಗಳಾಗಿವೆ. ಹಿರೇಕೆರೂರ ವಿಧಾನಸಭಾ ಕ್ಷೇತ್ರದಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ 81.91 ಕೋಟಿ ರೂಪಾಯಿ ವ್ಯಯಿಸಲಾಗಿದೆ. ಸರ್ಕಾರ ಈ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡಿದೆ. ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಕಾರ್ಯತತ್ಪರತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಎರಡು ತಾಲೂಕಿನ ಎಲ್ಲ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹೊಸ ಬಸ್ ಮಾರ್ಗ ಆರಂಭಿಸಲು ಯೋಜನೆ ರೂಪಿಸಬೇಕು ಎಂದು ಶಾಸಕರು ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ರಟ್ಟಿಹಳ್ಳಿ ತಹಸೀಲ್ದಾರ್ ಕೆ.ಗುರುಬಸವರಾಜ, ತಾಪಂ ಇಒ ಲಕ್ಷಿ್ಮೕಕಾಂತ ಬೊಮ್ಮಣ್ಣನವರ, ಗ್ರೇಡ್​-2 ತಹಸೀಲ್ದಾರ್ ಶಿವನಗೌಡ ಸಿದ್ದನಗೌಡ್ರ, ಸಮಿತಿ ಸದಸ್ಯರಾದ ಪ್ರಭು ನಡುವಿನಮನಿ, ಸಂತೋಷ ಸುಳಗನ್ನಿ, ಕುಮಾರ ಪಾಟೀಲ, ಸುನೀತಾ ಕೊಡ್ಲೇರ, ರೂಪಾ ಮಾಸೂರ, ಸಿದ್ದಲಿಂಗೇಶ್ವರ ತಂಬಾಕದ, ನಾಸೀರ್​ಖಾನ್ ಬಡಗಿ, ಕುಮಾರ ಪೂಜಾರ, ವೀರಭದ್ರಪ್ಪ ಬನ್ನಿಹಟ್ಟಿ, ಷಣ್ಮುಖಯ್ಯ ಮಳಿಮಠ, ದತ್ತಾತ್ರೇಯ ರಾಯ್ಕರ್, ಸರ್ಫರಾಜ ಮಾಸೂರ, ತಾಪಂ ಸಹಾಯಕ ನಿರ್ದೇಶಕ ನಾಗರಾಜಪ್ಪ ಹಡಗಲಿ, ಸಿಡಿಪಿಒ ಜಯಶ್ರೀ ಪಾಟೀಲ, ವಾಯವ್ಯ ಸಾರಿಗೆ ಘಟಕ ವ್ಯವಸ್ಥಾಪಕ ಮಂಜುನಾಥ ಹಡಪದ, ಉದ್ಯೋಗ ಅಧಿಕಾರಿ ಚೈತನ್ಯ ಮೋಹಿತೆ, ಅಧಿಕಾರಿಗಳು ಇದ್ದರು.

Share This Article

ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream

Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…

ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items

Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…