More

    ಅಕ್ರಮವಾಗಿ ಭಾರತದಲ್ಲಿ ತಂಗಿದ್ದ 28 ವಿದೇಶಿಯರು ಗಡಿಪಾರು!

    ನವದೆಹಲಿ: ಭಾರತದಲ್ಲಿ ಅಕ್ರಮವಾಗಿ ತಂಗಿದ್ದ 28  ಮಂದಿ ವಿದೇಶಿಯರನ್ನು ಗಡಿಪಾರು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ವೀಸಾ ಇಲ್ಲದೆ ಭಾರತದಲ್ಲಿ ಉಳಿದುಕೊಂಡಿರುವ ವಿದೇಶಿ ಪ್ರಜೆಗಳನ್ನು ಬಂಧಸಿಲು ಈಗಾಗಲೇ ಅಧಿಕಾರಿಗಳ ತಂಡ ಕಾರ್ಯಪ್ರವೃತ್ತವಾಗಿವೆ. ಅಕ್ರಮವಾಗಿ ತಂಗಿದ್ದ ಒಟ್ಟು 28 ವಿದೇಶಿಯರನ್ನು ನವದೆಹಲಿಯ ದ್ವಾರಕಾ ಪ್ರದೇಶದಿಂದ ಗಡಿಪಾರು ಮಾಡಲಾಗಿದ್ದು, ಈ ವರ್ಷ ಅಂತಹ ಪ್ರಕರಣಗಳ ಒಟ್ಟು ಸಂಖ್ಯೆ 82 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: ಭೀಕರ ಅಪಘಾತ; ಅಂತರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತ್ಯು
    ಹಲವರು ವಿದೇಶಿಯರು ಮಾನ್ಯ ವೀಸಾ ಇಲ್ಲದೆ ಭಾರತದಲ್ಲಿ ತಂಗಿರುವುದು ಕಂಡುಬಂದಿದೆ. ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿಗಳ (ಎಫ್‌ಆರ್‌ಆರ್‌ಒ) ಮುಂದೆ ಹಾಜರುಪಡಿಸಲಾಯಿತು. ಅಧಿಕಾರಿಗಳು ಅವರನ್ನು ಗಡಿಪಾರು ಮಾಡಲು ಆದೇಶಿಸಿದರು. ಅದರಂತೆ ಅವರನ್ನು ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌

    2022 ರಲ್ಲಿ ಒಟ್ಟು 437 ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಈ ವರ್ಷ (2023) ಇಲ್ಲಿಯವರೆಗೆ ಒಟ್ಟು 82 ವಿದೇಶಿ ಪ್ರಜೆಗಳನ್ನು ದೇಶದಿಂದ ಗಡೀಪಾರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವಿಷಕಾರಿ ಹುಲ್ಲು ತಿನ್ನುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ 34 ಕುರಿಗಳು ದುರಂತ ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts