More

    ಮರವಂತೆ ಹೊರಬಂದರು ಅಭಿವೃದ್ಧಿಗೆ 85 ಕೋಟಿ ರೂ., ಶಾಸಕ ಸುಕುಮಾರ ಶೆಟ್ಟಿ ಹೇಳಿಕೆ

    ಗಂಗೊಳ್ಳಿ: ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶಗಳಿರುವ ಮರವಂತೆ ಇನ್ನಷ್ಟು ಅಭಿವೃದ್ಧಿಯಾಗಲಿದೆ. ಇಲ್ಲಿನ ಬೀಚ್ ಅಭಿವೃದ್ಧಿಗೆ ಸರ್ಕಾರ 5 ಕೋಟಿ ರೂ. ಬಿಡುಗಡೆ ಮಾಡಿದ್ದು, 86 ಕೋಟಿ ರೂ. ವೆಚ್ಚದ ತಡೆಗೋಡೆ ರಚನೆ ಕಾರ್ಯ ಪೂರ್ಣಗೊಂಡಿದೆ. ಮರವಂತೆ ಹೊರಬಂದರು ಅಭಿವೃದ್ಧಿಗೆ 85 ಕೋಟಿ ರೂ. ಬಿಡುಗಡೆಗೆ ಸರ್ಕಾರ ಸಮ್ಮತಿಸಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

    ಜಿಲ್ಲಾ ಪಂಚಾಯಿತಿ, ಬೈಂದೂರು ತಾಲೂಕು ಪಂಚಾಯಿತಿ ಹಾಗೂ ಮರವಂತೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಗ್ರಾಮೀಣ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮರವಂತೆ ಗ್ರಾಪಂ ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕದ ಏಕರೂಪ ಬ್ರಾೃಂಡಿಂಗ್ ಲೋಕಾರ್ಪಣೆ ಮತ್ತು ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯ ತಾಲೂಕು ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಉಡುಪಿ ಜಿಲ್ಲೆಯಲ್ಲಿ ಮೂರು ಗ್ರಾಪಂಗಳು ಈ ಯೋಜನೆಗೆ ಆಯ್ಕೆಯಾಗಿದ್ದು, ಇವುಗಳ ಪೈಕಿ ಮರವಂತೆ ಗ್ರಾಪಂನ ಎಸ್.ಎಲ್.ಆರ್.ಎಂ ಘಟಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ವಚ್ಛತೆ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಹಾಗೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದರು.

    ಬೈಂದೂರು ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮರವಂತೆ ಗ್ರಾಪಂ ಮಾಜಿ ಅಧ್ಯಕ್ಷೆ ಅನಿತಾ ಆರ್.ಕೆ., ಬೈಂದೂರು ತಾಪಂ ಸಹಾಯಕ ನಿರ್ದೇಶಕ ಮಂಜುನಾಥ ಶೆಟ್ಟಿ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸನ್ಮಾನ ಶೆಟ್ಟಿ, ಕಾರ್ಯದರ್ಶಿ ದಿನೇಶ ಶೇರುಗಾರ್ ಮತ್ತಿತರರು ಉಪಸ್ಥಿತರಿದ್ದರು. ಎಸ್‌ಎಲ್‌ಆರ್‌ಎಂ ಘಟಕದ ಕಾರ್ಯಕರ್ತರು ಹಾಗೂ ಸಿಬ್ಬಂದಿಯನ್ನು ಗೌರವಿಸಲಾಯಿತು.

    ಮರವಂತೆ ಗ್ರಾಪಂ ಆಡಳಿತಾಧಿಕಾರಿ ಜ್ಯೋತಿ ಸ್ವಾಗತಿಸಿದರು. ಎಸ್‌ಬಿಎಂ ಜಿಲ್ಲಾ ಸಮಾಲೋಚಕ ರಘುನಾಥ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಶಿಕ್ಷಕ ಸತ್ಯನಾ ಕೊಡೇರಿ ಮತ್ತು ಶಿಕ್ಷಕಿ ಚೈತ್ರಾ ಬಿ.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪಿಡಿಒ ರಿಯಾಜ್ ಅಹಮ್ಮದ್ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts