More

    ಫೆ.26ಕ್ಕೆ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

    ಬೆಂಗಳೂರು: ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.

    ಈ ಹಿಂದೆ ನಿಗದಿಯಾಗಿದ್ದ ದಿನಾಂಕಕ್ಕೆ ಅನುಗುಣವಾಗಿ ಹಾವೇರಿಯಲ್ಲಿ ನುಡಿಜಾತ್ರೆಯ ಕಹಳೆ ಊದಲು ಭರದಿಂದ ಸಿದ್ಧತೆ ನಡೆದಿತ್ತು. ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ಹಲವು ಪ್ರಕ್ರಿಯೆ ನಡೆದಿತ್ತು. ಜ.22ರಂದು ನಡೆದ ಕಸಾಪ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರನ್ನಾಗಿ ಕವಿ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಸಮ್ಮೇಳನ ಮೂಂದೂಡಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಇದನ್ನೂ ಓದಿರಿ ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

    ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ತಾತ್ಕಾಲಿಕವಾಗಿ ಸಮ್ಮೇಳನ ಮುಂದೂಡಲು ನಿರ್ಧರಿಸಲಾಗಿದೆ. ಸಮ್ಮೇಳನಲ್ಲಿ ಹೆಚ್ಚು ಜನ ಸೇರುವುದರಿಂದ ಕೊವೀಡ್ ನಿಯಮ ಪಾಲನೆ ಕಷ್ಟ. ಫೆಬ್ರವರಿ ಅಂತ್ಯಕ್ಕೆ ಹೊಸ ಮಾರ್ಗಸೂಚಿ ಪ್ರಕಟವಾಗಲಿದ್ದು, ಆ ನಂತರ ಮಾರ್ಚ್ 9ಕ್ಕೆ ಮತ್ತೊಮ್ಮೆ ಸಭೆ ನಡೆಸಿ, ಸಮ್ಮೇಳನ ದಿನಾಂಕ ನಿಗದಿ ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

    ಇನ್ನು ರಾಜಕೀಯ ಸಮಾವೇಶಗಳಿಗೆ ಇಲ್ಲದ ರೂಲ್ಸ್​ ಸಾಹಿತ್ಯ ಸಮ್ಮೇಳನಕ್ಕೆ ಏಕೆ ಎಂಬ ಆಕ್ರೋಶ ಕೆಲವೆಡೆ ವ್ಯಕ್ತವಾಗುತ್ತಿದೆ. ರಾಜಕೀಯ ಕಾರ್ಯಕ್ರಮಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಆಗ ಇಲ್ಲದ ನಿಯಮ, ಸಮ್ಮೇಳನಕ್ಕೆ ಅಡ್ಡ ಬರುತ್ತಾ? ಎಂದು ಪ್ರಶ್ನಿಸಿದ್ದಾರೆ.

    ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

    ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ

    ಬೆಂಗ್ಳೂರಲ್ಲಿ ನಿವೃತ್ತ ಉಪ ತಹಸೀಲ್ದಾರ್ ಕೊಂದು ಬಿಡದಿಯಲ್ಲಿ ಸುಟ್ಟುಹಾಕಿದ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts