More

    9ರೊಳಗೆ ಪ್ರತಿಯೊಬ್ಬರಿಗೂ ಪಡಿತರ ವಿತರಿಸಿ

    ಅಫಜಲಪುರ: ವೈದ್ಯಕೀಯ ಸಿಬ್ಬಂದಿ ಸೈನಿಕರಂತೆ ಕರೊನಾ ವಿರುದ್ಧ ಹೋರಾಟ ನಡೆಸುತ್ತಿದ್ದು, ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೊನಾ ತಡೆಗಟ್ಟಲು ಸಹಕರಿಸಬೇಕು ಎಂದು ಸಂಸದ ಡಾ. ಉಮೇಶ ಜಾಧವ್ ಮನವಿ ಮಾಡಿದರು.
    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕರೊನಾ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಕೆಮ್ಮು, ನೆಗಡಿ ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಕಾಣಿ. ಏ.9ರೊಳಗೆ ಪ್ರತಿ ಹಳ್ಳಿಗಳಲ್ಲಿ ಮನೆ-ಮನೆಗೆ ಪಡಿತರ ವಿತರಿಸಬೇಕು. ಉಜ್ವಲ ಯೋಜನೆಯಡಿ 3 ತಿಂಗಳ ಗ್ಯಾಸ್ ವಿತರಿಸಿ ಎಂದು ತಾಕೀತು ಮಾಡಿದರು.
    ಶಾಸಕ ಎಂ.ವೈ. ಪಾಟೀಲ್ ಮಾತನಾಡಿ, ಕರೊನಾದಿಂದ ರೈತಾಪಿ ವರ್ಗ ಸಮಸ್ಯೆ ಅನುಭವಿಸುತ್ತಿದೆ. ತೋಟಗಾರಿಕೆ ಬೆಳೆಗಳನ್ನು ಖರೀದಿಸಲು ಸರ್ಕಾರ ಮುಂದೆ ಬರಬೇಕು ಎಂದು ಒತ್ತಾಯಿಸಿದರು.
    ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಮಾತನಾಡಿ, ಕರೊನಾ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕಿದೆ. ಸಾಮಾನ್ಯ ನಾಯಕ ಹಾಗೂ ಕ್ಷೇತ್ರದ ಮಾಜಿ ಶಾಸಕನಾಗಿ ಸಭೆಯಲ್ಲಿ ಪಾಲ್ಗೊಂಡಿದ್ದೇನೆ. ಜನತೆ ಮನೆಯಲ್ಲಿದ್ದು, ಸರ್ಕಾರದ ಆದೇಶ ಪಾಲಿಸಬೇಕು ಎಂದು ಮನವಿ ಮಾಡಿದರು.ತಾಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಜಿಪಂ ಸದಸ್ಯ ಶಿವರಾಜ ಪಾಟೀಲ್ ರದ್ದೇವಾಡಗಿ, ತಹಸೀಲ್ದಾರ್ ಯಲ್ಲಪ್ಪ ಸುಬೇದಾರ, ತಾಪಂ ಇಒ ಶಂಕರ ಕಣ್ಣಿ, ಟಿಎಚ್ಒ ರತ್ನಾಕರ ತೋರಣ, ಅಧಿಕಾರಿಗಳಾದ ಚಿತ್ರಶೇಖರ ದೆಗಲಮಡಿ, ಶಂಕರಗೌಡ ಪಾಟೀಲ್, ಡಾ.ಮಹಾಂತಪ್ಪ ಹಾಳಮಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts