More

    ಚಿಕ್ಕಮಗಳೂರು ಜಿಲ್ಲೆಯಲ್ಲಿ 9.62 ಲಕ್ಷ ಮತದಾರರು

    ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ಅಂತಿಮಗೊಂಡಿದ್ದು, 9,62,998 ಮತದಾರರಿದ್ದಾರೆ ಎಂದು ಡಿಸಿ, ಜಿಲ್ಲಾ ಚುನಾವಣಾಧಿಕಾರಿ ಮೀನಾ ನಾಗರಾಜ್ ಮಾಹಿತಿ ನೀಡಿದರು.

    ಚುನಾವಣಾ ಆಯೋಗದ ನಿರ್ದೇಶನದಂತೆ ಅಂತಿಮ ಮತದಾರರ ಪಟ್ಟಿ ಪ್ರದರ್ಶಿಸಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ 4,89,590 ಮಹಿಳೆಯರು, 4,73,377 ಪುರುಷರು ಹಾಗೂ 31 ಇತರ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದರು.
    ಮತದಾರರು ತಮ್ಮ ಮಾಹಿತಿಯನ್ನು ಪರಿಶೀಲಿಸಿಕೊಂಡು ಖಾತ್ರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿ ವೆಬ್ ಸೈಟ್ ಡಿಡಿಡಿ.್ಚಛಿಟಚ್ಟ್ಞಠಿ.ಚ್ಟ.್ಞಜ್ಚಿ.ಜ್ಞಿ ನಲ್ಲಿ ಸಹ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದರು.
    ಸಾರ್ವಜನಿಕರು, ಮತದಾರರು ಯಾವುದೇ ಕಚೇರಿಗೆ ಹೋಗದೆ ಅವರಿರುವ ಸ್ಥಳದಿಂದಲೇ ವೆಬ್ ಪೋರ್ಟಲ್ ಟಠಿಛ್ಟಿ.ಛ್ಚಿಜಿ.ಜಟ.ಜ್ಞಿ, ಟಠಿಛ್ಟಿ ಏಛ್ಝಿಟ್ಝಜ್ಞಿಛಿ ಟಚಿಜ್ಝಿಛಿ ಅ ಮೂಲಕ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬಂಧಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
    18 ವರ್ಷ ತುಂಬಿದ ಅರ್ಹ ಯುವ ಮತದಾರರ ಸೇರ್ಪಡೆಗೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಕಾಲೇಜುಗಳಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಜಾಗೃತಿ ಮೂಡಿಸಲಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಎಸಿ ದಲ್ಜಿತ್‌ಕುಮಾರ್ ಇದ್ದರು.
    26ರಿಂದ ಸಂವಿಧಾನ ಜಾಗೃತಿ ಜಾಥಾ: ಚಿಕ್ಕಮಗಳೂರು ಜಿಲ್ಲಾದ್ಯಂತ ಜ.26ರಿಂದ ಫೆ.24ರವರೆಗೆ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
    ಜಿಪಂ ಸಭಾಂಗಣದಲ್ಲಿ ಸೋಮವಾರ ಸಂವಿಧಾನ ದಿನಾಚರಣೆಯ ರಾಷ್ಟ್ರೀಯ ಮಟ್ಟದ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧ ಚಿತ್ರ ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಸಂಚರಿಸಲಿದೆ ಎಂದರು. ಜಾಥಾಕ್ಕೆ ಜ.26 ರಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡುವರು. ಜನವರಿ 26ರಿಂದ ಆರಂಭವಾಗುವ ಜಾಥಾ ಫೆ.25ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಂವಿಧಾನ ಜಾಗೃತಿ ಸಮಾವೇಶ ತಲುಪಲಿದೆ. ಸಂವಿಧಾನ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶ ಎಂದರು.
    ಜಿಪಂ ಸಿಇಒ ಡಾ. ಬಿ.ಗೋಪಾಲಕೃಷ್ಣ ಮಾತನಾಡಿ, ಕಾರ್ಯಕ್ರಮಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಾಥಾ ವ್ಯವಸ್ಥೆ ಕುರಿತು ನಿಗಾ ವಹಿಸುವಂತೆ ಸೂಚಿಸಲಾಗಿದೆ. ಸ್ತಬ್ಧಚಿತ್ರದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಪರಿಕಲ್ಪನೆ, ಅವರ ಪ್ರತಿಮೆ, ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಮಾಹಿತಿ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಸರ್ಕಾರದ ಐದು ಯೋಜನೆಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
    ಗ್ರಾಪಂ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಅಲ್ಲಿ ಸಂವಿಧಾನ ಕುರಿತು ಅರಿವು ಮೂಡಿಸಲಾಗುವುದು. ಪಂಚಾಯಿತಿಯಿಂದ ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆ ಸೇರಿ ಸಾಂಸ್ಕೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು. ಎಸ್ಪಿ ಡಾ. ವಿಕ್ರಮ ಅಮಟೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts