More

  ಆಟವಾಡುತ್ತಿದ್ದ ವೇಳೆ ನೆಲಬಾಂಬ್ ಸ್ಫೋಟ; 9 ಮಕ್ಕಳು ಸಾವು

  ನವದೆಹಲಿ: ದಶಕಗಳ ಹಿಂದಿನ ನೆಲಬಾಂಬ್​ ಸ್ಫೋಟಗೊಂಡ ಪರಿಣಾಮ ಒಂಬತ್ತು ಮಕ್ಕಳು ಪ್ರಾಣಬಿಟ್ಟಿರುವ ಘಟನೆ ಅಫ್ಘಾನಿಸ್ತಾನದ ಅಗ್ನೇಯ ಭಾಗದಲ್ಲಿರುವ ಘಜ್ನಿ ಪ್ರಾಂತ್ಯದ ಗೇರು ಜಿಲ್ಲೆಯಲ್ಲಿ ನಡೆದಿದೆ.

  ಘಜ್ನಿ ಪ್ರಾಂತ್ಯದ ಗೇರು ಜಿಲ್ಲೆಯಲ್ಲಿ ಭಾನುವಾರ ಘಟನೆ ನಡೆದಿದ್ದು, ಮಕ್ಕಳು ಆಟವಾಡುತ್ತಿದ್ದ ವೇಳೆ ನೆಲಬಾಂಬ್​ ಸ್ಫೋಟಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  ಇದನ್ನೂ ಓದಿ: ಶ್ರೀಶೈಲ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಯುವಕ ಹೃದಯಾಘಾತಕ್ಕೆ ಬಲಿ

  ಈ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಂತೀಯ ಮುಖ್ಯಸ್ಥ ಹಮೀದುಲ್ಲಾ ನಿಸಾರ್,ರಷ್ಯಾದ ಆಕ್ರಮಣದ ಸಂದರ್ಭದಲ್ಲಿ ಸ್ಫೋಟಗೊಳ್ಳದ ಉಳಿದಿದ್ದ ನೆಲಬಾಂಬ್ ಮಕ್ಕಳ ಕೈಗೆ ಸಿಕ್ಕಿದ್ದು, ಅವರು ಅದರಲ್ಲಿ ಆಟವಾಡುತ್ತಿದ್ದಾಗ ಸ್ಫೋಟಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓಂಬತ್ತು ಮಂದಿ ಮೃತಪಟ್ಟಿದ್ದು, ಇದರಲ್ಲಿ ಐವರು ಹುಡುಗಿಯರು ಹಾಗೂ ನಾಲ್ವರು ಹುಡುಗರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಂತೀಯ ಮುಖ್ಯಸ್ಥ ಹಮೀದುಲ್ಲಾ ನಿಸಾರ್ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts