ಸಿನಿಮಾ

9 ಕೆಜಿ ತಿಮಿಂಗಲ ವಾಂತಿ ವಶ

ಅಕ್ರಮವಾಗಿ ಮಾರಾಟ ಮಾಡಲು ಕೇರಳದಿಂದ ತಂದಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ 9 ಕೆ.ಜಿ. 821 ಗ್ರಾಂ ಅಂಬರ್‌ಗ್ರೀಸ್ (ತಿಮಿಂಗಲ ವಾಂತಿ) ವಶಪಡಿಸಿಕೊಂಡು, ಕೇರಳ ಮೂಲದ ಮೂವರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.

ಅಂಬರ್‌ಗ್ರೀಸನ್ನು ಸುಗಂಧ ದ್ರವ್ಯ ಹಾಗೂ ಔಷಧ ತಯಾರಿಕೆಯಲ್ಲಿ ಬಳಕೆ ಮಾಡಲಿದ್ದು, ಕೋಟ್ಯಂತರ ರೂ. ಬೆಲೆ ಬಾಳುತ್ತದೆ. ವಿದೇಶಗಳಲ್ಲಿ ಇದಕ್ಕೆ ಭಾರಿ ಬೇಡಿಕೆ ಇದೆ. ಆರೋಪಿಗಳು ಅಂಬರ್‌ಗ್ರೀಸನ್ನು ಕೇರಳದಿಂದ ತಂದು ಎಚ್.ಡಿ.ಕೋಟೆಯ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಹ್ಯಾಂಡ್‌ಪೋಸ್ಟ್ ಬಳಿ ದಾಳಿ ನಡೆಸಿದ ಎಚ್.ಡಿ.ಕೋಟೆ ಹಾಗೂ ಸೆನ್ ಪೊಲೀಸರು ಅಂಬರ್‌ಗ್ರೀಸ್ ಹಾಗೂ ಕಾರಿನ ಸಮೇತ ಕೇರಳದ ಮೂವರನ್ನು ಬಂಧಿಸಿದ್ದಾರೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆರೋಪಿಗಳು ಅಂಬರ್‌ಗ್ರೀಸನ್ನು ಬೇರೊಬ್ಬರಿಂದ ಪಡೆದುಕೊಂಡು ಮತ್ತೊಬ್ಬರಿಗೆ ಮಾರಾಟ ಮಾಡಲು ಮುಂದಾಗಿದ್ದರು. ಇದರಲ್ಲಿ ಅಂತಾರಾಷ್ಟ್ರೀಯ ಮಾರಾಟ ಜಾಲ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.

Latest Posts

ಲೈಫ್‌ಸ್ಟೈಲ್