More

    ಇಷ್ಟ ಇದ್ರೆ ಬನ್ನಿ.. ಬರೋವಾಗ ತಿಂಡಿ-ಕುಡಿಯೋ ನೀರು ನೀವೇ ತನ್ನಿ; ಸೋಮವಾರ ಶಾಲೆ ಶುರು, ವಿದ್ಯಾರ್ಥಿಗಳಿಗೆ ಸೂಚನೆ

    ಬೆಂಗಳೂರು: ಆನ್‌ಲೈನ್ ಕ್ಲಾಸ್ ನಡೆಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಯಲ್ಲಿ ನಿರಂತರತೆ ಕಾಯ್ದುಕೊಂಡಿದ್ದ ಶಾಲಾ-ಕಾಲೇಜುಗಳು ಇದೀಗ 9ರಿಂದ 12ರ ವರೆಗಿನ ಭೌತಿಕ ತರಗತಿಗಳನ್ನು ಸೋಮವಾರದಿಂದ ಆರಂಭಿಸಲು ಸಜ್ಜಾಗಿವೆ. ಶಿಕ್ಷಣ ಸಂಸ್ಥೆಗಳಿಗಾಗಿ ಪ್ರತ್ಯೇಕ ಮಾರ್ಗಸೂಚಿಗಳನ್ನು, ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು (ಎಸ್‌ಒಪಿ) ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಇವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶನ ನೀಡಿದೆ.

    ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಕರೊನಾ ನಿಗ್ರಹ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಮಾಸ್ಕ್, ಸ್ಯಾನಿಟೈಸರ್ ಬಳಕೆಯೂ ಕಡ್ಡಾಯವಾಗಿದೆ. ಶಾಲಾವರಣ, ಕೊಠಡಿಗಳಲ್ಲಿ ಶುಚಿತ್ವ ಕಾಪಾಡುವುದು, ತರಗತಿಗಳಲ್ಲಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

    ಇದನ್ನೂ ಓದಿ: ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…

    ಕರೊನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಭೌತಿಕ ತರಗತಿ ಆರಂಭವಾಗಲಿದೆ. ತರಗತಿಗಳ ಪ್ರವೇಶ ಪಡೆಯಲು ಪಾಲಕರ ಲಿಖಿತ ಅನುಮತಿ ಹಾಗೂ ಕೋವಿಡ್ ಸೋಂಕಿಲ್ಲವೆಂದು ದೃಢೀಕರಣ ಪತ್ರ ಅಗತ್ಯವಾಗಿದೆ. ಮಕ್ಕಳು ಮನೆಯಿಂದಲೇ ಕುಡಿಯುವ ನೀರು, ಉಪಾಹಾರ ತರಬೇಕು. ಭೌತಿಕ ತರಗತಿಗಳಿಗೆ ಹಾಜರಾಗುವುದು ಕಡ್ಡಾಯವಲ್ಲವೆಂದು ಸ್ಪಷ್ಟವಾಗಿ ತಿಳಿಸಿರುವುದರಿಂದ ವಿದ್ಯಾರ್ಥಿಗಳು ಇಚ್ಛಿಸಿದಲ್ಲಿ ಮಾತ್ರ ತರಗತಿಗೆ ತೆರಳಬಹುದಾಗಿದೆ.

    ಶೇ.50 ವಿದ್ಯಾರ್ಥಿಗಳಿಗೆ ಅವಕಾಶ: ತರಗತಿಯ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಿಯು ಕಾಲೇಜುಗಳಲ್ಲಿ ತಲಾ ಮೂರು ದಿನಗಳಂತೆ ವಿದ್ಯಾರ್ಥಿಗಳನ್ನು ವಿಂಗಡಿಸಿ ಪಾಠ ಮಾಡಲಾಗುತ್ತದೆ. ಇನ್ನು ಪ್ರೌಢಶಾಲೆಗಳಲ್ಲಿ ಅರ್ಧ ದಿನವಷ್ಟೇ ತರಗತಿಗಳನ್ನು ನಡೆಸುವಂತೆ ತಿಳಿಸಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ, ಉಳಿದ ಅವಧಿಗೆ ಆನ್‌ಲೈನ್ ಅಥವಾ ಪರ್ಯಾಯ ಕ್ರಮಗಳ ಮೂಲಕ ಬೋಧನೆ ಮುಂದುವರಿಸಲು ತಿಳಿಸಲಾಗಿದೆ.

    ಇದನ್ನೂ ಓದಿ: ಟೇಬಲ್ ಮೇಲಿತ್ತು ಮೂರು ಟೀ ಕಪ್​; ದಂಪತಿಯನ್ನು ಪರಿಚಿತರೇ ಕೊಂದರಾ?

    ಇಂದು ಸಿಎಂ ಭೇಟಿ: ಶಾಲಾ- ಕಾಲೇಜು ಆರಂಭದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯೊಂದಕ್ಕೆ ಬೆಳಗ್ಗೆ 10.30ಕ್ಕೆ ಭೇಟಿ ನೀಡಲಿದ್ದಾರೆ. ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಿರ್ಮಲಾರಾಣಿ ಅನುದಾನಿತ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಜತೆಗೂಡಲಿದ್ದಾರೆ.

    ನಾನು ಟೈಟಾಗಿದ್ದೇನೆ ಗೊತ್ತಾಗಿಲ್ಲ, ಇನ್ನೊಂದು ಕಾರ್ಡ್ ನಂಬರ್ ಕೊಡಿ ಎಂದ; 730 ರೂಪಾಯಿ ವೈನ್‌ಗೆ 1.79 ಲಕ್ಷ ರೂ. ಧೋಖಾ

    ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

    ‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts