23.2 C
Bangalore
Saturday, December 14, 2019

ರಾತ್ರಿ ತಾಯಿ ಮಗ್ಗುಲಲ್ಲಿ ಮಲಗಿದ್ದ 9 ತಿಂಗಳ ಹೆಣ್ಣುಮಗು ಎರಡು ದಿನಗಳ ಬಳಿಕ ಶವವಾಗಿ ಸಿಕ್ಕಿದ್ದು ಎಲ್ಲಿ ಗೊತ್ತಾ?

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ವಾರಂಗಲ್​: ರಾತ್ರಿ ಮನೆಯ ಟೆರೇಸ್​ ಮೇಲೆ ತಂದೆ-ತಾಯಿಯ ಪಕ್ಕದಲ್ಲಿ ಮಲಗಿದ್ದ ಈ 9 ತಿಂಗಳ ಹಸುಗೂಸನ್ನು ಎತ್ತಿಕೊಂಡು ಹೋದ ಪಕ್ಕದ ಮನೆಯಾತ ನೀಚಕೃತ್ಯ ಎಸಗಿದ್ದಾನೆ.

ವಾರಂಗಲ್​ನಲ್ಲಿ ಘಟನೆ ನಡೆದಿದ್ದು, ಹೆಣ್ಣುಮಗುವನ್ನು ಹೊತ್ತುಕೊಂಡು ಹೋದ ವ್ಯಕ್ತಿ ಅದರ ಮೇಲೆ ಅತ್ಯಾಚಾರ ಮಾಡಲೂ ಪ್ರಯತ್ನಿಸಿದ್ದಾನೆ. ಲೈಂಗಿಕವಾಗಿ ಕಿರುಕುಳ ಕೊಟ್ಟಿದ್ದಾನೆ. ಆ ಮಗು ಅಳಲು ಪ್ರಾರಂಭಿಸಿದ ಕೂಡಲೇ ಅದರ ಬಾಯಿ ಕಟ್ಟಿದ್ದಾನೆ. ಈ ಕಾರಣಕ್ಕೆ ಉಸಿರುಗಟ್ಟಿ ಮಗು ಮೃತಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೋಮವಾರ ರಾತ್ರಿ ಘಟನೆ ನಡೆದಿದೆ. ಆದರೆ ಮರುದಿನ ಪಾಲಕರು ತಮ್ಮ ಮಗು ಕಾಣಿಸುತ್ತಿಲ್ಲವೆಂದು ಪೊಲೀಸರಿಗೆ ದೂರು ನೀಡಿದ್ದರು. ಮಾಹಿತಿಗಳನ್ನು ಆಧರಿಸಿ ತನಿಖೆ ನಡೆಸಿದಾಗ ಆರೋಪಿ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. ಅವನ ಜತೆಗೆ ಮಗುವಿನ ಮೃತದೇಹವೂ ಇತ್ತು.

ಹೆಣ್ಣುಮಗುವನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅದು ಸಾವನ್ನಪ್ಪಿದೆ ಎಂದು ವೈದ್ಯರು ಖಚಿತಪಡಿಸಿದರು.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಗುವಿನ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೋಸ್ಟ್​ ಮಾರ್ಟಂ ಬಳಿಕವಷ್ಟೇ ಅದರ ಮೇಲೆ ಅತ್ಯಾಚಾರ ಆಗಿದೆಯಾ, ಇಲ್ಲವಾ ಎಂಬುದರ ಖಚಿತ ಮಾಹಿತಿ ಸಿಗಲಿದೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...