ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು! Heart Attack

heat attack school girl
Published on

ರಾಜಸ್ಥಾನ:  (Heart Attack ) ಒಂಬತ್ತು ವರ್ಷದ ಬಾಲಕಿ ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಹೋಗುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ರಾಜಸ್ಥಾನದ ದಂತಾ ಪಟ್ಟಣದಲ್ಲಿ ಈ ದುರಂತ ಘಟನೆ ಬೆಳಕಿಗೆ ಬಂದಿದೆ.

ಪ್ರಾಚಿ ಕುಮಾವತ್ (9) ಮೃತ ಬಾಲಕಿಯಾಗಿದ್ದಾಳೆ. ಈಕೆ ಮಧ್ಯಾಹ್ನ ಊಟಕ್ಕೆ ಶಾಲೆಗೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಸಹ ವಿದ್ಯಾರ್ಥಿಗಳ ಮಾಹಿತಿ ಮೇರೆಗೆ ಶಾಲಾ ಸಿಬ್ಬಂದಿ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ವೈದ್ಯರು ಆಕೆ ಈಗಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ.

ನಡೆದಿದ್ದೇನು?:

ಪ್ರಾಚಿ ಕುಮಾವತ್ ಖಾಸಗಿ ಶಾಲೆಯಲ್ಲಿ 4 ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿ ಶಾಲೆಯಲ್ಲಿ ಊಟದ ಸಮಯವಾಗಿದ್ದರಿಂದ, ಮಕ್ಕಳೊಂದಿಗೆ ಊಟ ಮಾಡಲು ಸಿದ್ಧಳಾಗುತ್ತಿದ್ದಳು. ಈ ಮಧ್ಯೆ, ಅವಳು ಅಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಳು. ಶಿಕ್ಷಕರು ತಕ್ಷಣ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ಶಾಲಾ ಸಿಬ್ಬಂದಿ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದರು.

ಶಿಕ್ಷಕರು ಮತ್ತು ಪೋಷಕರು ಒಟ್ಟಾಗಿ ಬಾಲಕಿಯನ್ನು ಆಂಬ್ಯುಲೆನ್ಸ್ ಸಹಾಯದಿಂದ ಸಿಕಾರ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಬಾಲಕಿ ಈಗಾಗಲೇ ಮೃತಪಟ್ಟಿದ್ದಾಳೆ ಎಂದು ದೃಢಪಡಿಸಿದರು. ಬಾಲಕಿಯ ಆರೋಗ್ಯ ಸ್ಥಿತಿಯನ್ನು ಗಮನಿಸಿದರೆ, ಆಕೆ ಬಹುಶಃ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ವೈದ್ಯ ಹೇಳಿದ್ದಾರೆ.   ಮಗಳಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ ಎಂದು ಹೇಳುತ್ತಾ ಹೆತ್ತವರು ಕಣ್ಣೀರು ಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net