ಪೊಲೀಸರ ಭರ್ಜರಿ ಬೇಟೆ; ಟೆಂಪೋದಲ್ಲಿ ಸಾಗಿಸುತ್ತಿದ್ದ 900 ಕೆಜಿ ದನದ ಮಾಂಸ ವಶಕ್ಕೆ

police
Published on

ಮುಂಬೈ: ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಪೊಲೀಸ್​ ಅಧಿಕಾರಿಗಳು 900 ಕೆಜಿ ದನದ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ.

ವಶಪಡಿಸಿಕೊಂಡಿರುವ ದನದ ಮಾಂಸದ ಒಟ್ಟು ಮೌಲ್ಯ 8.8 ಲಕ್ಷ ಎಂದು ಹೇಳಲಾಗಿದ್ದು, ಪೊಲೀಸರು ಅನ್ಸರ್ ಶೇಖ್ (23) ಹಾಗೂ ಮಾಂಸ ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಯೊಬ್ಬರು, ವಾಹನ ಒಂದರಲ್ಲಿ ದನದ ಮಾಂಸ ಸಾಗಿಸಲಾಗುತ್ತಿದೆ ಎಂಬ ಬಗ್ಗೆ ನಮಗೆ ಮಾಹಿತಿ ತಿಳಿದು ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ವಾಹನದಲ್ಲಿ ದನದ ಮಾಂಸ ಸಾಗಿಸುತ್ತಿರುವುದು ಕಂಡು ಬಂದಿತ್ತು. ಕೂಡಲೇ ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಯಿತು.

ಭಾರತೀಯ ನ್ಯಾಯ ಸಂಹಿತಾ ಮತ್ತು ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯಿದೆಯ ಸೆಕ್ಷನ್ 325 ಮತ್ತು ಉಪ ವಿಭಾಗ 5(ಬಿ)(ಕೆ) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಳಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net