More

    ಒಳ ಉಡುಪಿನಲ್ಲಿ 907 ಗ್ರಾಂ ಚಿನ್ನ ಸಾಗಾಟ; ಕೆಐಎ ಕಸ್ಟಮ್ಸ್ ಅಧಿಕಾರಿಗಳಿಂದ ಆರೋಪಿ ಸೆರೆ

    ಬೆಂಗಳೂರು: ವಿದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ಕ್ಕೆ ಬಂದಿಳಿದ ವಿಮಾನದ ಪ್ರಯಾಣಿಕನ ಒಳ ಉಡುಪಿನಲ್ಲಿ 907 ಗ್ರಾಂ ಚಿನ್ನದ ಪೇಸ್ಟ್ ಪತ್ತೆಯಾಗಿದೆ.

    ದುಬೈಯಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಭಾನುವಾರ ಬಂದ ವಿಮಾನದಲ್ಲಿ ಪ್ರಯಾಣಿಕರ ತಪಾಸಣೆಗೆ ಒಳಪಡಿಸಿದ್ದರು. ಅದರಲ್ಲಿ ಓರ್ವನ ಮೇಲೆ ಅನುಮಾನ ಬಂದು ಸ್ಕಾೃನಿಂಗ್‌ಗೆ ಒಳಪಡಿಸಿದಾಗ ಒಳ ಉಡುಪಿನಲ್ಲಿ ಲೋಹ ಇಟ್ಟುಕೊಂಡಿರುವುದು ಗೊತ್ತಾಗಿದೆ. ಒಳ ಉಡುಪು ಬಿಚ್ಚಿಸಿ ಪರಿಶೀಲನೆ ನಡೆಸಿದಾಗ 907 ಗ್ರಾಂ ಚಿನ್ನದ ಪೇಸ್ಟ್ ಪತ್ತೆಯಾಗಿದೆ.

    ಇದರಲ ಮೌಲ್ಯ 55 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ ಎಂದು ಕಸ್ಟಮ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಕೇಸ್ ದಾಖಲಿಸಿ ಚಿನ್ನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts