More

    93 ಜನರಿಗೆ ಆರೋಗ್ಯ ತಪಾಸಣೆ


    ಯಳಂದೂರು
    : ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಆಯೋಜಿಸಿತ್ತು.

    ಆರೋಗ್ಯ ಅಮೃತ ಅಭಿಯಾನದ ತಾಲೂಕು ಸಂಯೋಜಕ ಸಿದ್ದರಾಜು ಮಾತನಾಡಿ, ಗ್ರಾಮೀಣ ಜನರ ಆರೋಗ್ಯವಂತ ಜೀವನ ಶೈಲಿಗೆ ಒತ್ತು ನೀಡುವ ಮತ್ತು ರೋಗದ ಹೊರೆ ತಗ್ಗಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

    30 ವರ್ಷಕ್ಕಿಂತ ಮೇಲ್ಪಟ್ಟವರು ಆರೋಗ್ಯ ತಪಾಸಣೆಗೊಳಪಟ್ಟರು. ಮಧುಮೇಹ ಮತ್ತು ರಕ್ತದೊತ್ತಡದಲ್ಲಿ ಹೆಚ್ಚು ಸಮಸ್ಯೆ ಕಂಡು ಬಂದವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಒಟ್ಟು 93 ಜನರು ಆರೋಗ್ಯ ತಪಾಸಣೆಗೊಳಪಟ್ಟರು.

    ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಸದಸ್ಯರಾದ ಪುಟ್ಟಬಸವಯ್ಯ, ಎಚ್.ಆರ್.ಕುಮಾರ್, ಶಿವಪ್ರಕಾಶ್, ಪಿಡಿಒ ನಿರಂಜನ್ , ಆರೋಗ್ಯಾಧಿಕಾರಿಗಳಾದ ಶಿವಶಂಕರ್, ಅರ್ಪಿತಾ, ರಾಧಾ, ಆಶಾ ಕಾರ್ಯಕರ್ತೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts