More

    ಭರವಸೆಗಳ ಈಡೇರಿಕೆಯಲ್ಲಿ ಶೇ.95 ಗುರಿ ಸಾಧನೆ

    ಗುಂಡ್ಲುಪೇಟೆ: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಗಳಲ್ಲಿ ತಾಲೂಕಿನಲ್ಲಿ ಶೇ.95 ಗುರಿ ಮುಟ್ಟಲಾಗಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

    ಗುರುವಾರ ತಾಲೂಕಿನ ಮೂಖಹಳ್ಳಿ ಗ್ರಾಮದಲ್ಲಿ ನಿರ್ಮಿಸಿದ್ದ ನೂತನ ಕಟ್ಟಡ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

    ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ಕಾರಣಗಳಿಂದ ಕೆಲವರಿಗೆ ತಲುಪಿಲ್ಲ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರ ಪ್ರತಿ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡಿದ್ದು ಅನುದಾನಗಳ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ಅಂತರ್ಜಲಮಟ್ಟ ಕೆಳಗಿಳಿದು ಕುಡಿಯುವ ನೀರಿನ ಸರಬರಾಜಿನ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಯಾವುದೇ ಗ್ರಾಮಗಳಲ್ಲಿಯೂ ನೀರಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸದ್ಯದಲ್ಲಿಯೇ ಸರ್ಕಾರ ಅನುದಾನ ಬಿಡುಗಡೆ ಮಾಡಲಿದೆ ಎಂದು ಹೇಳಿದರು.

    ಅಧಿಕಾರ ವಿಕೇಂದ್ರಿಕರಣಕ್ಕೆ ಅನುಷ್ಠಾನಗೊಳಿಸಿದ ಗ್ರಾಮ ಪಂಚಾಯಿತಿಗಳು ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿ ಗ್ರಾಮಗಳ ಅಭಿವೃದ್ದಿಗೆ ಯೋಜನೆ ರೂಪಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಸಕಾಲದಲ್ಲಿ ಕೆಲಸ ಕಾರ್ಯಗಳು ನಡೆಯದ ಬಗ್ಗೆ ಸಾರ್ವಜನಿಕರು ದೂರು ಹೇಳುತ್ತಿದ್ದಾರೆ. ಎಲ್ಲರಿಗೂ ಒಂದೇ ರೀತಿಯ ಕಾನೂನುಗಳಿದ್ದು ಅಧಿಕಾರಿಗಳು ಜನರಿಗೆ ಕಾನೂನಿನ ಪರಿಮಿತಿಗಳಲ್ಲಿ ಸಕಾಲದಲ್ಲಿ ಕೆಲಸ ಕಾರ್ಯ ಮಾಡಿಕೊಡಬೇಕು. ನರೇಗಾ ಯೋಜನೆಯಲ್ಲಿ ಹೆಚ್ಚು ಕೆಲಸ ಮಾಡುವಂತಾಗಬೇಕು ಎಂದು ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಮಹದೇವಮ್ಮ, ಉಪಾಧ್ಯಕ್ಷ ಶಿವಮೂರ್ತಿ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ತಾಲೂಕು ಪಂಚಾಯಿತಿ ಇಒ ರಾಮಲಿಂಗಯ್ಯ, ಪಿಡಿಒ ಗುರುಪ್ರಸಾದ್ ಸೇರಿದಂತೆ ಹಲವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts