More

    96.74 ಕೋಟಿ ರೂ. ಬಜೆಟ್ ಮಂಡನೆ

    ಶಿರಸಿ: ತಾಲೂಕಿನ ವಿವಿಧ ಇಲಾಖೆಗಳ ವೇತನ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗಾಗಿ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿ ಒಟ್ಟು 96.74 ಕೋಟಿ ರೂಪಾಯಿಗಳ ಬಜೆಟ್ ಅನ್ನು ಗುರುವಾರ ಮಂಡಿಸಲಾಗಿದೆ. ಕಳೆದ ಸಾಲಿಗಿಂತ 10.08 ಕೋಟಿ ಹೆಚ್ಚಿನ ಅನುದಾನ ನೀಡಲಾಗಿದೆ.

    ನಗರದ ತೋಟಗಾರಿಕಾ ಇಲಾಖೆ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಬಜೆಟ್ ಮಂಡಿಸಿ ಸದಸ್ಯರಿಂದ ಅನುಮೋದನೆ ಪಡೆದರು. ಶೈಕ್ಷಣಿಕವಾಗಿ ತಾಲೂಕನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ 74.02 ಕೋಟಿ ರೂ. ಅನುದಾನ ನೀಡಲಾಗಿದೆ. ಆರೋಗ್ಯ ಇಲಾಖೆಗೆ ಹೊರಗುತ್ತಿಗೆ ಸಿಬ್ಬಂದಿ ವೇತನ, ಕಚೇರಿ ವೆಚ್ಚ ಹಾಗೂ ವೈದ್ಯಕೀಯ ಉಪಕರಣಗಳ ಖರೀದಿ ಸೇರಿ ಒಟ್ಟು 40.32 ಲಕ್ಷ, ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಮೂಲಕ ವಿದ್ಯಾರ್ಥಿ ವೇತನ, ಸಿಬ್ಬಂದಿ ವೇತನ, ಹೊರಗುತ್ತಿಗೆ ಸಿಬ್ಬಂದಿ ಸಂಬಳ, ವಸತಿ ನಿಲಯಗಳ ನಿರ್ವಹಣೆ ಸೇರಿ 183.89 ಲಕ್ಷ ಅನುದಾನ ನೀಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಏಳಿಗೆಗಾಗಿ 9.50 ಲಕ್ಷ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಗ್ರಾಮೀಣ ಭಾಗದ ಅಂಗನವಾಡಿ ಕಟ್ಟಡ ದುರಸ್ತಿ, ಮಕ್ಕಳಿಗೆ ಆಹಾರ ಕಾರ್ಯ ಯೋಜನೆಗೆ, ಕಾರ್ಯಕರ್ತೆಯರ ಸಂಬಳ, ಹೊರಗುತ್ತಿಗೆ ಸಿಬ್ಬಂದಿ ವೇತನ ಸೇರಿ ಒಟ್ಟು 1286.13 ಲಕ್ಷ ರೂ. ಅನುದಾನ ಒದಗಿಸಲಾಗಿದೆ. ಕೃಷಿ ಇಲಾಖೆಗೆ 51.73 ಲಕ್ಷ ರೂ., ತೋಟಗಾರಿಕೆ ಇಲಾಖೆ ಕಾರ್ಯಕ್ರಮಕ್ಕೆ 0.28 ಲಕ್ಷ ರೂ., ಪಶುಸಂಗೋಪನಾ ಇಲಾಖೆಗೆ 240.06 ಲಕ್ಷ ರೂ., ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಯೋಜನೆಯಡಿ ಕೊಳವೆ ಬಾವಿಗಳ ದುರಸ್ತಿ, ತಾಲೂಕು ಪಂಚಾಯಿತಿ ಅಧಿಕಾರಿ, ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ವೇತನ, ಇಂಧನ, ಕಚೇರಿ ವೆಚ್ಚ, ಪ್ರವಾಸ ಭತ್ಯೆ ಸೇರಿ ಒಟ್ಟು 365.99 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

    ನಂತರ ವಿವಿಧ ಇಲಾಖೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ, ಕೃಷಿ ಇಲಾಖೆ ಅಧಿಕಾರಿ ಮಧುಕರ ನಾಯ್ಕ ಹಾಗೂ ಇತರ ಅಧಿಕಾರಿಗಳು ತಮ್ಮ ಇಲಾಖೆ ಸಾಧಿಸಿದ ಪ್ರಗತಿಯ ಮಾಹಿತಿ ನೀಡಿದರು.

    ಈ ವೇಳೆ ಉಪಾಧ್ಯಕ್ಷ ಚಂದ್ರು ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಹಳದೋಟ, ಕಾರ್ಯನಿರ್ವಹಣಾಧಿಕಾರಿ ಎಫ್.ಜಿ. ಚಿನ್ನಣ್ಣನವರ ಇದ್ದರು.

    ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭಕ್ಕೆ ಸದ್ಯ ಪಾಲಕರ ಒಪ್ಪಿಗೆಯಿಲ್ಲ. ಈ ಕುರಿತು ಪಾಲಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ಬಹುತೇಕ ಪಾಲಕರು ಶಾಲೆ ಆರಂಭಕ್ಕೆ ವಿರೋಧಿಸುತ್ತಿದ್ದಾರೆ. ಎಲ್ಲ ಪಾಲಕರ ಅಭಿಪ್ರಾಯ ಸಂಗ್ರಹಿಸಿ ಜೂ.20ರಂದು ಸರ್ಕಾರದ ಗಮನಕ್ಕೆ ತರಲಾಗುವುದು. | ಎಂ.ಎಸ್. ಹೆಗಡೆ ಬಿಇಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts