ಬೆಂಗಳೂರು: ಸುಮಂತ್ ಕ್ರಾಂತಿ ನಿರ್ದೇಶನದ ‘ಬರ್ಕ್ಲಿ’ ಚಿತ್ರದ ಟೀಸರ್ ಶುಕ್ರವಾರ ಬಿಡುಗಡೆ ಆಗಿದೆ. ಪಕ್ಕಾ ಮಾಸ್ ಅಂಶವಿರುವ ಟೀಸರ್ನಲ್ಲಿ ಅಬ್ಬರದ ಡೈಲಾಗ್ ಜತೆಗೆ ಖಡಕ್ ಆ್ಯಕ್ಷನ್ ಸೀನ್ಗಳೂ ಹೇರಳವಾಗಿವೆ. ಪ್ರೀತಿ ಪ್ರೇಮದ ಎಳೆಯೂ ಟೀಸರ್ನಲ್ಲಿ ಕಾಣಿಸುತ್ತದೆ.
ಇದನ್ನೂ ಓದಿ: ಓಟಿಟಿಗೆ ಬರುತ್ತಾ ಅಕ್ಷಯ್ ಅಭಿನಯದ `ಬೆಲ್ಬಾಟಮ್’?
ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ನಿರ್ಮಿಸುತ್ತಿರುವ ‘ಬರ್ಕ್ಲಿ’ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದ್ದು, ಲಾಕ್ಡೌನ್ ಮುಗಿದ ನಂತರ ಚಿತ್ರ ಬಿಡುಗಡೆಯಾಗಲಿದೆ. ‘ಕರಿಯ’, ‘ಗಣಪ’, ‘ಕರಿಯ ೨’ ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ‘ಬರ್ಕ್ಲಿ’ ಚಿತ್ರವನ್ನು ನಿರ್ಮಿಸಿದ್ದಾರೆ.
‘ಗಣಪ’, ‘ಕರಿಯ 2’ ಚಿತ್ರಗಳಲ್ಲಿ ನಟಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾದರೆ, ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಮಿಕ್ಕಂತೆ ಚರಣರಾಜ್, ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.
ಇದನ್ನೂ ಓದಿ:ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಕರೊನಾ ಆಘಾತ; ‘ನೆಮ್ಮದಿಯಾಗಿ ನಿದ್ರಿಸಿ’ ಎಂದವರು ಚಿರನಿದ್ರೆಗೆ…
‘ಬಹದ್ದೂರ್’ ಚೇತನ್ ಕುಮಾರ್, ಅಭಿ ಕನಸಿನ ಕವನ ಈ ಚಿತ್ರದ ಹಾಡುಗಳನ್ನು ರಚಿಸಿದ್ದು, ಜ್ಯೂಡ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕೃಷ್ಣಕುಮಾರ್, ಎನ್.ಎಂ.ಸೂರಿ ಛಾಯಾಗ್ರಹಣ ಈ ಚಿತ್ರಕ್ಕಿದೆ.