ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದು ಒಂದು ಮಗು ಸೇರಿದಂತೆ ಒಂದೇ ಕುಟುಂಬದ 7 ಜನ ಸಾವಿಗೀಡಾಗಿದ್ದಾರೆ.
ಇದು ಭೀಮಪ್ಪ ಖನಗಾವಿ ಎಂಬುವವರಿಗೆ ಸೇರಿದ ಮನೆಯಾಗಿದ್ದು, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿದ್ದಾರೆ.