ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿರಾನಗರದ ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯನ್ನು ಮೀಸಲು ಕೋವಿಡ್ ಆಸ್ಪತ್ರೆಯನ್ನಾಗಿ ಗುರುತಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
2020ರಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಬಳಿಕ ಈ ಆಸ್ಪತ್ರೆಯನ್ನು ಮೀಸಲು ಕೋವಿಡ್ ಆಸ್ಪತ್ರೆ ಎಂದು ಗುರುತಿಸಿ, ಎಲ್ಲ ಹಾಸಿಗೆಗಳನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿತ್ತು. 2021ರಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಅಲ್ಲಿ ಕೋವಿಡೇತರ ರೋಗಿಗಳಿಗೂ ಚಿಕಿತ್ಸೆ ಪುನರಾರಂಭಿಸಲಾಗಿತ್ತು. ಈಗ ಮತ್ತೆ ಹೊಸ ಪ್ರಕರಣಗಳು ಹೆಚ್ಚಳ ಆಗುತ್ತಿರುವುದರಿಂದ ಆಸ್ಪತ್ರೆಯಲ್ಲಿ ಕೋವಿಡೇತರ ಚಿಕಿತ್ಸೆಗಳನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಕೇವಲ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ತಿಳಿಸಿದ್ದಾರೆ.
ಹೊಸ ವರ್ಷದ ಮೊದಲ 2 ದಿನ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ಫೋಟೋ ಮುದ್ರಿಸಿದ ಕೆಎಂಎಫ್! ಭಾವುಕರಾದ ಅಭಿಮಾನಿಗಳು
ಮೊದಲ ರಾತ್ರಿ ಕನ್ಯತ್ವ ಪರೀಕ್ಷೆ ನಡೆಯುತ್ತಾ? ಕನ್ಯಾಪೊರೆ ಇರಲಿಲ್ಲ ಅಂದ್ರೆ ಏನರ್ಥ?