ಮಂಗಳೂರು: ರಾಜ್ಯದಲ್ಲಿ ಹಿಜಾಬ್ ಕುರಿತ ವಿವಾದ ತಾರಕಕ್ಕೇರಿರುವಾಗಲೇ ಮತ್ತೊಂದು ವಿವಾದ ತಲೆ ಎತ್ತುವ ಲಕ್ಷಣಗಳು ಗೋಚರಿಸಿವೆ. ಏಕೆಂದರೆ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲೇ ನಮಾಜ್ ಮಾಡಿದ್ದು, ಆ ವಿಡಿಯೋ ವೈರಲ್ ಆಗಲಾರಂಭಿಸಿದೆ.
ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ನಮಾಜ್ ಪ್ರಕರಣ ನಡೆದಿದೆ. ಇಲ್ಲಿ 6-7ನೇ ತರಗತಿಯ ಐದು ಮಂದಿ ವಿದ್ಯಾರ್ಥಿಗಳು ನಮಾಜ್ ಮಾಡಿದ್ದು, ಇದೀಗ ಆ ಬಗ್ಗೆ ಆಕ್ಷೇಪ ವ್ಯಕ್ತವಾಗಲಾರಂಭಿಸಿದೆ.
ಕಳೆದ ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ಈ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಶಾಲಾ ಸಿಬ್ಬಂದಿ ಯಾವುದೇ ಕ್ರಮಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
‘ಬೆಳಗಾವಿ ಕರ್ನಾಟಕದ್ದೇ, ಇಲ್ಲಿಯ ಮೂಲಭಾಷೆ ಕನ್ನಡವೇ’: ಸಿಕ್ಕಿದೆ ಬ್ರಿಟಿಷರ ಕಾಲದ ಮತ್ತೊಂದು ಮಹತ್ವದ ಕನ್ನಡ ದಾಖಲೆ
ಆ ಕಾಲೇಜಲ್ಲಿ ಹಿಜಾಬ್ ತೊಡಲು ಈ ಹಿಂದೆ ಅವಕಾಶ ಇರಲಿಲ್ಲ; ಮಹತ್ವದ ದಾಖಲೆ ಬಹಿರಂಗ