More

    ಜ್ಞಾನವಾಪಿ ಮಸೀದಿಯಲ್ಲಿ ಶೃಂಗಾರ ಗೌರಿ, ಶಿವಲಿಂಗ: ವಿಚಾರಣೆ ನಡೆಯಲಿದೆಯೆ? ಎಲ್ಲರ ಚಿತ್ತ ಕೋರ್ಟ್​ನತ್ತ- ಬಿಗಿ ಬಂದೋಬಸ್ತ್​

    ವಾರಾಣಸಿ: ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಇದೆ ಎನ್ನಲಾದ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದೆಯೋ, ಇಲ್ಲವೋ ಎಂಬ ಬಗ್ಗೆ ವಾರಣಾಸಿ ಜಿಲ್ಲಾ ಕೋರ್ಟ್​ ಇಂದು ಆದೇಶ ಪ್ರಕಟಿಸಲಿದೆ.

    ಮೂರು ತಿಂಗಳಿಗೂ ಹೆಚ್ಚು ಕಾಲ ನಡೆದ ವಾದ-ಪ್ರತಿವಾದಗಳ ನಂತರ ಈ ಅರ್ಜಿಯ ತೀರ್ಪನ್ನು ಕೋರ್ಟ್​ ಕಾಯ್ದಿರಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಇಂದು ತೀರ್ಪು ಪ್ರಕಟಿಸಲಿದ್ದಾರೆ.

    ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್‍ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲೆ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು. ಮಸೀದಿಯ ಜಾಗದಲ್ಲಿ ಮಂದಿರಾ ಇದೆ ಎಂದು ಕೆಲವರು ವಾದಿಸಿದ್ದರು.

    ಈ ನಡುವೆ ಐವರು ಮಹಿಳೆಯರು ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರ್ಟ್ ಮೇಟ್ಟಿಲೇರಿದ್ದರು. ಪ್ರಕರಣ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆ ನಡೆಸಲು ಸೂಚಿಸಿತ್ತು.

    ಆದರೆ ಈ ಅರ್ಜಿಯನ್ನು ವಜಾ ಮಾಡಬೇಕು ಇದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಮಸೀದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬಗ್ಗೆ ಕೋರ್ಟ್​ ಇಂದು ತೀರ್ಮಾನಿಸಲಿದೆ.

    ಈ ಹಿನ್ನೆಲೆಯಲ್ಲಿ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆಯೇ, ಇಲ್ಲವೇ ಎನ್ನುವ ಬಗ್ಗೆ ಕೋರ್ಟ್ ಮೊದಲು ವಿಚಾರಣೆ ನಡೆಸಿತ್ತು, ಇಂದು ಈ ಬಗ್ಗೆ ಕೋರ್ಟ್ ಮೊದಲ ತೀರ್ಪು ನೀಡುತ್ತಿದೆ. ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿದ್ದಲ್ಲಿ ಮಾತ್ರ ಕೋರ್ಟ್ ಪೂಜೆಗೆ ಅವಕಾಶ ನೀಡಬೇಕಾ ಎನ್ನುವ ಅರ್ಜಿಯ ವಿಚಾರಣೆ ನಡೆಸಲಿದೆ.

    ವಾರಾಣಸಿಯಲ್ಲಿ ಬಿಗಿ ಭದ್ರತೆ

    ಆದೇಶ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ವಾರಾಣಸಿಯಲ್ಲಿ ವಿಚಾರಣೆಗೂ ಮುನ್ನ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಜಿಲ್ಲೆಯ ಭದ್ರತೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಎ. ಸತೀಶ್ ಗಣೇಶ್ ಭಾನುವಾರ ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)

    ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಜಮ್ಮುವಿನ ಮುಸ್ಲಿಂ ಮುಖಂಡ: ರಾಷ್ಟ್ರಪತಿ ಆದೇಶ

    ತೆಲಂಗಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ- ಕೆಟಿಆರ್​ ಜತೆ ಮಾತುಕತೆ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts