ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್ ಇಲ್ಯೂಶನ್) ಎಂದು ಕರೆಯುತ್ತೇವೆ.
ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ನೀವು ಹುಲ್ಲುಗಾವಲು ಪ್ರದೇಶವನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ಚಿರತೆಯೊಂದು ಅಡಗಿಕೊಂಡಿದೆ. ಬೇಟೆಗೆ ಹೊಂಚು ಹಾಕುತ್ತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಹುಲ್ಲಿನ ಬಣ್ಣ ಮತ್ತು ಚಿರತೆಯ ಬಣ್ಣಕ್ಕೆ ಸಾಮ್ಯತೆ ಇದೆ. ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಚಿರತೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್ ಸಮಯದಲ್ಲಿ ನೀವು ಚಿರತೆಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್ ಮಾರ್ಕ್ಸ್ ಕೊಟ್ಟುಬಿಡಿ. ಒಂದು ವೇಳೆ ಚಿರತೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್)
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್: ರಣಬೀರ್ ಕಪೂರ್ ಕುಟುಂಬಕ್ಕೆ ಮಹಾಲಕ್ಷ್ಮೀಯ ಆಗಮನ
KGFನಲ್ಲಿ ಹಿಂಸೆಯ ವೈಭವೀಕರಣದ ಬಗ್ಗೆ ಟೀಕೆ: ಒಳ್ಳೆಯ ವಿಚಾರಗಳನ್ನು ಬೋಧಿಸಲು ಸಾಧ್ಯವಿಲ್ಲ ಎಂದ ನಟ ಯಶ್