ಬೆಂಗಳೂರು: ನಾಗವಾರ ಬಳಿ ಮಂಗಳವಾರ ಬೆಳಗ್ಗೆ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದ ದುರ್ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ತಾಯಿ-ಮಗು ಮೃತಪಟ್ಟಿದ್ದಾರೆ.
ಹೊರಮಾವಿನ ಮುಖ್ಯರಸ್ತೆಯಲ್ಲಿರುವ ಡಿಎಸ್ ಮ್ಯಾಕ್ಸ್ ಅಪಾರ್ಟ್ಮೆಂಟ್ನ ನಿವಾಸಿ ತೇಜಸ್ವಿನಿ (26) ಮತ್ತು ವಿಹಾನ್ (ಎರಡೂವರೆ ವರ್ಷ) ಮೃತರು.
ಗದಗ ಮೂಲದ ಲೋಹಿತ್ ಕುಮಾರ್ ಮತ್ತು ತೇಜಸ್ವಿನಿ ದಂಪತಿ ಇಬ್ಬರೂ ಬೆಂಗಳೂರಿನಲ್ಲಿ 10 ವರ್ಷಗಳಿಂದ ವಾಸವಿದ್ದರು. ಇಬ್ಬರೂ ಸಿವಿಲ್ ಇಂಜಿನಿಯರ್ ಆಗಿದ್ದರು. ಮಕ್ಕಳಿಬ್ಬರನ್ನೂ ಬೇಬಿ ಸಿಟ್ಟಿಂಗ್ಗೆ ಬಿಟ್ಟು, ಪತ್ನಿಯನ್ನ ಕಂಪನಿ ಬಳಿ ಡ್ರಾಪ್ ಮಾಡಿ ಬಳಿ ತಾನೂ ಕೆಲಸಕ್ಕೆ ಹೋಗಲೆಂದು ಪತ್ನಿ-ಮಕ್ಕಳನ್ನು ಬೈಕ್ನಲ್ಲಿ ಲೋಹಿತ್ ಕರೆದುಕೊಂಡು ಹೋಗುತ್ತಿದ್ದರು. ದುರಾದೃಷ್ಟವಶಾತ್ ಚಲಿಸುತ್ತಿದ್ದ ಬೈಕ್ ಮೇಲೆ ಮೆಟ್ರೋ ಪಿಲ್ಲರ್ ಕುಸಿದಿದ್ದು, ನಾಲ್ವರೂ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಇವರನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗ ಮೃತಪಟ್ಟಿದ್ದಾರೆ. ಲೋಹಿತ್ ಮತ್ತು ಮಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಅತ್ತ ತಾಯಿ-ಮಗು ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗಿದ್ದಾರೆ ಎಂದು ಮೆಟ್ರೋ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
‘ನಮ್ಮ ಮೆಟ್ರೋ’ ಪಿಲ್ಲರ್ ದುರಂತ: ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಣೆ
ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ